Featured

ಮಂಗಳೂರು : ಮೇ 14 ಮತ್ತು 15 ರಂದು ಕೊಣಾಜೆಯ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ – Vishwnaews24

ಮಂಗಳೂರು : ಮೇ 14 ಮತ್ತು 15 ರಂದು ಕೊಣಾಜೆಯ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ತರಬೇತಿ ಮತ್ತು ನಿಯೋಜನಾ ಘಟಕಗಳು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಣಾಜೆಯ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಮೇ 14 ಮತ್ತು 15 ರಂದು ಉದ್ಯೋಗ ಮೇಳ ಆಯೋಜಿಸಿವೆ.

ಮ್ಯಾಜಿಕ್ ಬಸ್‌ನ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ವಲಯದ ಕ್ಲಸ್ಟರ್ ಮ್ಯಾನೇಜರ್ ಚಿರಂಜೀವಿ ಅಂಬರ್ನಾಥ್ ಮೇ 14 ರಂದು ಬೆಳಗ್ಗೆ 10.30 ಕ್ಕೆ ಉದ್ಯೋಗ ಮೇಳವನ್ನು ಮಂಗಳಾ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ ಕೆ, ಕುಲಸಚಿವ (ಪರೀಕ್ಷಾಂಗ) ಪ್ರೊ. ಪಿ ಎಲ್ ಧರ್ಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ, ಯುಇಐಜಿಬಿ ಉಪ ಮುಖ್ಯಸ್ಥ ಎಸ್.ಜೆ ಹೇಮಚಂದ್ರ, ಹಣಕಾಸು ಅಧಿಕಾರಿ, ಯುಇಐಜಿಬಿ ಮತ್ತು ಯುಟಿಪಿಸಿ ಮುಖ್ಯಸ್ಥ ಪ್ರೊ. ಕೆ ಎಸ್ ಜಯಪ್ಪ, ಯುಟಿಪಿಸಿ ಯೋಜನೆ ಆಧರಿತ ಸಲಹೆಗಾರ್ತಿ ಶಾರದಾ ಹೆಚ್ ಎಸ್ ಮೊದಲಾದವರು ಉಪಸ್ಥಿತರಿರಲಿದ್ದಾರೆ.

ಸುಮಾರು 40 ಕಂಪೆನಿಗಳು, 11,000 ಹುದ್ದೆಗಳು
ಎರಡು ದಿನಗಳ ಕಾಲ ನಡೆಯಲಿರುವ ಉದ್ಯೋಗ ಮೇಳದಲ್ಲಿ ಸುಮಾರು 40 ಕಂಪನಿಗಳು ಭಾಗವಹಿಸಲಿದ್ದು ಸುಮಾರು 11,100 ಹುದ್ದೆಗಳಿಗೆ ಅರ್ಹರ ನೇಮಕಾತಿ ನಡೆಯಲಿದೆ. ಯುಇಐಜಿಬಿ ಮತ್ತು ಯುಟಿಪಿಸಿ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಘಟಕ, ಸಂಯೋಜಿತ, ಸ್ವಾಯತ್ತ ಕಾಲೇಜುಗಳಿಂದ ಮತ್ತು ಮಂಗಳೂರು ವಿವಿ ಕ್ಯಾಂಪಸ್ನ ವಿದ್ಯಾರ್ಥಿಗಳಿಂದ ಸುಮಾರು 10,000 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದು ಅದನ್ನು ಮ್ಯಾಜಿಕ್ ಬಸ್ ಎಂಬ ಸರ್ಕಾರೇತರ ಸಂಸ್ಥೆಗೆ ಹಸ್ತಾಂತರಿಸಿದೆ. ಸಂಸ್ಥೆ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಟೋಕನ್ ಒದಗಿಸಿ ನೇಮಕಾತಿಗೆ ನೇರ ಸಂದರ್ಶನ ನಡೆಸಲಿದೆ. ಕನಿಷ್ಠ ವೇತನ ರೂ. 10,000 ಇರಲಿದೆ.

ಸ್ಥಳದಲ್ಲೇ ನೋಂದಣಿಗೂ ಅವಕಾಶ
ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಲೂ (Walk in interview) ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ಬಯೋಡಾಟ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಫೋಟೋ, ಎಸ್ಎಸ್ಎಲ್ಸಿ ಅಂಕಪಟ್ಟಿಯ ಜೊತೆಗೆ ಗರಿಷ್ಠ ಅರ್ಹತೆಯ ಅಂಕಪಟ್ಟಿಯನ್ನು ತರಬೇಕು. ಅಂತಿಮ ವರ್ಷದ ಪದವಿ ಅಥವಾ ಸ್ನಾತಕೋತ್ತರ ಪದವಿ ಓದುತ್ತಿರುವವರೂ (2021-22) ಸಂದರ್ಶನಕ್ಕೆ ಹಾಜರಾಗಬಹುದು.

ಮಂಗಳೂರು ವಿಶ್ವವಿದ್ಯಾನಿಲಯದ ಹ್ಯುಮಾನಿಟೀಸ್ (ಮಾನವಿಕ), ಮ್ಯಾನೇಜ್ಮೆಂಟ್ (ನಿರ್ವಹಣೆ), ಸೈನ್ಸ್ (ವಿಜ್ಞಾನ) ಮತ್ತು ಲೆಕ್ಚರ್ ಕಾಂಪ್ಲೆಕ್ಸ್ಗಳನ್ನು ಉದ್ಯೋಗ ಮೇಳಕ್ಕೆ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಪ್ರತಿಯೊಂದರಲ್ಲೂ ಸಹಾಯವಾಣಿ ಇರಲಿದೆ. 80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ನೇಮಿಸಲಾಗಿದೆ. ಉದ್ಯೋಗದಾತ ಕಂಪನಿಗಳ ಸಿಬ್ಬಂದಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗುವುದು. ಸುಗಮ ಸಾರಿಗೆ ಸಂಚಾರಕ್ಕೂ ವ್ಯವಸ್ಥೆ ಮಾಡಲಾಗಿದೆ.

ಪ್ರಮುಖ ಕಂಪನಿಗಳು
ಅಪೋಲೋ ಫಾರ್ಮಸಿ, ಮುತ್ತೂಟ್ ಫೈನಾನ್ಸ್, ಮೆಡಿಪ್ಲಸ್, ಜಸ್ಟ್ ಡಯಲ್, ಬೈಜೂಸ್, ಆಕ್ಸಿಸ್ ಬ್ಯಾಂಕ್, ಕಾಂಚನಾ ಗ್ರೂಪ್ ಆಫ್ ಕಂಪೆನೀಸ್, ಹೋಂಡಾ ಮ್ಯಾಟ್ರಿಕ್ಸ್, ದಿಯಾ ಸಿಸ್ಟಮ್ಸ್, ಹೆಚ್ಡಿಎಫ್ಸಿ ಬ್ಯಾಂಕ್, ಮಾಂಡೊವಿ ಮೋಟರ್ಸ್, ಮೋರ್ ಸೂಪರ್ ಮಾರ್ಕೆಟ್ ಸೇರಿದಂತೆ 40 ಕ್ಕೂ ಹೆಚ್ಚು ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಹೆಚ್ಚಿನ ಮಾಹಿತಿಗಾಗಿ
ಶಾರದಾ ಹೆಚ್ ಸೋಮಯಾಜಿ, ಯುಟಿಪಿಸಿ ಯೋಜನೆ ಆಧರಿತ ಸಲಹೆಗಾರ್ತಿ- 63630 22303
ಗುರುಪ್ರಸಾದ್ ಟಿ ಎನ್, ವಿವಿ ಕಾಲೇಜು (ಮಾಧ್ಯಮ ಸಂಬಂಧಿತ)- 99649 39267

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago