Featured

ಮಂಗಳೂರು : ಮೇ 16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಲೋಕಾರ್ಪಣೆ – vishwanews24

ಮಂಗಳೂರು : ಮೇ 16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಲೋಕಾರ್ಪಣೆ

ಮಂಗಳೂರು : ಪಡೀಲ್‌ನಲ್ಲಿ ಪಾರಂಪರಿಕ ಶೈಲಿಯಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣವನ್ನು ಮೇ 16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಇದೇ ಸಂದರ್ಭ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ಪೋಡಿ ಮುಕ್ತ ಅಭಿಯಾನದಡಿ 7,000 ಫಲಾನುಭವಿಗಳಿಗೆ ಆರ್‌ಟಿಸಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ದಾಖಲೆಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ದ.ಕ. ಜಿಲ್ಲೆಗೆ ಸುಂದರ ಹಾಗೂ ಸುಸಜ್ಜಿತ ಜಿಲ್ಲಾ ಕಚೇರಿ ನಿರ್ಮಾಣವಾಗಿರುವುದು ಸಂತಸ ನೀಡಿದೆ ಎಂದರು.

ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ಈ ಹಿಂದೆಯೇ ಈ ಕಚೇರಿ ಕಾಮಗಾರಿ ಪೂರ್ಣವಾಗಬೇಕಾಗಿತ್ತು. ಸುಮಾರು 55 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿ ಮುಗಿದಿತ್ತು. ಇದೀಗ ಮತ್ತೆ ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸ್ಮಾರ್ಟ್ ಸಿಟಿಯ 20 ಕೋಟಿ ರೂ. ಹಣದಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. 23 ಇಲಾಖೆಗಳು ಈ ನೂತನ ಕಚೇರಿಗೆ ಸ್ಥಳಾಂತರಿಸಲು ತೀರ್ಮಾನ ಮಾಡಲಾಗಿದೆ. ಬಹುತೇಕ ಇಲಾಖೆಗಳು ಉದ್ಘಾಟನೆಯ ಸಂದರ್ಭದಲ್ಲಿ ಸ್ಥಳಾಂತರಕ್ಕೆ ಕ್ರಮ ವಹಿಸಲಾಗಿದೆ. ಬಾಕಿ ಉಳಿದ ಕಚೇರಿಗಳು ಮುಂದಿನ ಮೂರು ವಾರಗಳೊಳಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ. ಈ ಕಟ್ಟಡ ಜಿಲ್ಲೆಯ ಆಡಳಿತ ವ್ಯವಸ್ಥೆಗೆ ಮೈಲಿಗಲ್ಲಾಗಿದ್ದು, ಹೊಸ ಕಚೇರಿ ಮೂಲಕ ಅಧಿಕಾರಿಗಳು ಪರಿಣಾಮಕಾರಿಯಾಗಿ ಜವಾಬ್ಧಾರಿ ನಿರ್ವಹಿಸಲು ಪ್ರೇರೇಪಿಸಲಿದೆ. ಸಾರ್ವಜನಿಕರಿಗೂ ಒಂದೇ ಸೂರಿನಡಿ ಸರಕಾರಿ ಸೇವೆಗಳು ಲಭ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನುಡಿದರು.

ಪೋಡಿ ಮುಕ್ತ ಅಭಿಯಾನದಡಿ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 10000 ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಆರ್‌ಟಿಸಿಗೆ ಸಂಬಂಧಿಸಿದ ದಾಖಲೆ ವಿತರಿಸಲು ಗುರಿ ಹೊಂದಲಾಗಿತ್ತು. ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ಭಾಗದ ಹೆಚ್ಚಿನ ಫಲಾನುಭವಿಗಳನ್ನು ಒಳಗೊಂಡು ಮೇ 16ರಂದು 7000 ಮಂದಿ ಕಂದಾಯ ಇಲಾಖೆಯ ದಾಖಲೆಗಳನ್ನು ಪಡೆಯಲಿದ್ದಾರೆ ಎಂದವರು ಹೇಳಿದರು.

ಇದೇ ವೇಳೆ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಸ್ಮಾರ್ಟ್ ಒಳಾಂಗಣ ಕ್ರೀಡಾಂಗಣವನ್ನು ಅದೇ ದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸುವರು. 200 ಮಂದಿ ವಿಕಲಚೇತನರಿಗೆ ವಿವಿಧ ಸೌಲಭ್ಯಗಳ ವಿತರಣೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಫಲಾನುಭವಿಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆ, ಅಲ್ಪಸಂಖ್ಯಾತ ನಿಗಮದಿಂದ ಫಲಾನುಭವಿಗಳಿಗೆ ವಾಹನಗಳ ವಿತರಣೆ ಕಾರ್ಯ ಇದೇ ದಿನ ಪಡೀಲ್‌ನಲ್ಲಿ ನಡೆಯಲಿರುವ ಸಭಾಕಾರ್ಯಕ್ರಮದಲ್ಲಿ ನೆರವೇರಲಿದೆ ಎಂದು ಅವರು ಹೇಳಿದರು.

ಉಳ್ಳಾಲದ ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯವೂ ಮೇ 16ರಂದು ನಿಗದಿಪಡಿಸಲಾಗಿತ್ತು. ಆದರೆ ಸ್ಪೀಕರ್ ಅವರು ಬೇರೆ ದಿನದಂದು ಕಾರ್ಯಕ್ರಮಕ್ಕೆ ದಿನ ನಿಗದಿ ಪಡಿಸುವುದಾಗಿ ತಿಳಿಸಿದ್ದಾರೆ. ಉಳಿದಂತೆ ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆಯ ಇನ್ನೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಬಾಕಿ ಇದೆ ಎಂದವರು ಹೇಳಿದರು.

ಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಬೋಜೇಗೌಡ ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago