Featured

ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ  : ಬಿರುವೆರ್ ಕುಡ್ಲ ಸಂಘಟನೆ ಅಸಮಾಧಾನ – Vishwanews24

ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ  : ಬಿರುವೆರ್ ಕುಡ್ಲ ಸಂಘಟನೆ ಅಸಮಾಧಾನ

ಮಂಗಳೂರು: ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ, ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ನಡೆಸಿದ್ದು, ಇದರ ಬೆನ್ನಲ್ಲೇ ಬಿರುವೆರ್ ಕುಡ್ಲ ಸಂಘಟನೆ ತನ್ನ ಅಸಮಾಧಾನ ಹೊರಹಾಕಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ, ನಾವು ಮೋದಿಗಾಗಿ ಬಹಳಷ್ಟು ಕೆಲಸ ಮಾಡಿದ್ದೇವೆ. ಹಲವು ವಿರೋಧದ ನಡುವೆಯೂ ನಾರಾಯಣ ಗುರುಗಳಿಗೆ ವೃತ್ತ, ಪ್ರತಿಮೆ ನಿರ್ಮಿಸಿದ್ದೇವೆ. ಆದರೆ ಮೋದಿಯ ಕಾರ್ಯಕ್ರಮದಲ್ಲಿ ನಮ್ಮೆಲ್ಲರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಲೇಡಿಹಿಲ್ ಸರ್ಕಲ್ ಅನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವನ್ನಾಗಿ ಮಾಡಲು ಬಿರುವೆರ್ ಕುಡ್ಲ ಸಂಘಟನೆ ಬಹಳಷ್ಟು ಶ್ರಮಿಸಿದೆ. ಸರಕಾರಕ್ಕೆ ಒತ್ತಡಹಾಕಿ, ಒಂದಷ್ಟು ಮಂದಿಯ ವಿರೋಧ ಕಟ್ಟಿಕೊಂಡು ಈ ಸರ್ಕಲ್ ಆಗುವಲ್ಲಿಯೂ ಸಂಘಟನೆ ದೊಡ್ಡಮಟ್ಟದ ಹೋರಾಟವನ್ನೇ ಮಾಡಿದೆ‌. ಇದಕ್ಕಾಗಿ ಏಳೆಂಟು ಬಾರಿ ಠಾಣೆಯ ಮೆಟ್ಟಿಲನ್ನೂ ಏರಬೇಕಾಯಿತು. ಆದರೆ ದೇಶದ ಪ್ರಧಾನಿ ಮೋದಿವರು ಬಂದು ಸರ್ಕಲ್ ನ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಸಂದರ್ಭ ಬಿರುವೆರ್ ಕುಡ್ಲ ಸಂಘಟನೆಗೆ ಯಾವ ಹೇಳಿಕೆಯೂ ಇಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪಕ್ಷದಲ್ಲಿಯೇ ಇಲ್ಲದವರಿಗೆ, ಉದ್ಯಮಿಗಳಿಗೆ, ಪಕ್ಷ ವಿರೋಧ ಮಾಡಿದ್ದವರನ್ನು ಏರ್ಪೋರ್ಟ್ ನಲ್ಲಿ ಮೋದಿಯವರನ್ನು ಸ್ವಾಗತಿಸಲು ಅವಕಾಶ ನೀಡಲಾಗಿದೆ. ಆದರೆ ಈ ವೃತ್ತವಾಗಲು ಶ್ರಮಿಸಿದವರಿಗೆ ಅವಕಾಶವಿಲ್ಲ. ತನಗೆ ಎಂಎಲ್ಎ ಸೀಟ್ ದೊರಕಿಸಿಕೊಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಿಗೆ ನಳಿನ್ ಗೆ ಒತ್ತಡ ಹಾಕಿ ಎಂದು ಹೇಳಲು ಪದೇಪದೇ ಕರೆ ಮಾಡುತ್ತಿದ್ದ ಸತೀಶ್ ಕುಂಪಲರಿಗೆ ಈಗ ನಾವು ಮರೆತುಹೋಗಿದ್ದೇವೆ. ಅವರಿಗೆ ಈಗ ಇರುವ ಬಿಜೆಪಿ ಜಿಲ್ಲಾಧ್ಯಕ್ಷ ಪಟ್ಟ ಮೂರು ವರ್ಷದವರೆಗೆ ಮಾತ್ರ ಇರಲಿದೆ. ಆ ಬಳಿಕ ಅವರೂ ಸಾಮಾನ್ಯ ಕಾರ್ಯಕರ್ತರೇ. ಸದ್ಯ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಎರಡು ಬಣಗಳಾಗಿದೆ. ನಳಿನ್ ಜೊತೆಯಿದ್ದವರನ್ನು ಸೈಡ್ ಲೈನ್ ಮಾಡಲಾಗುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಉದಯ ಪೂಜಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago