ಮಂಗಳೂರು: ಕರಾವಳಿಯ ಗಂಡುಕಲೆ ಯಕ್ಷಗಾನದಲ್ಲಿ ಧಾರ್ಮಿಕ ಸೌಹಾರ್ದತೆಯ ಸುಂದರ ಹಾಗೂ ಅಪರೂಪದ ಅಧ್ಯಾಯವೊಂದು ಅನಾವರಣಗೊಂಡಿದೆ. ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಆವರಣದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ಮುಸ್ಲಿಂ ಯುವತಿಯೊಬ್ಬರು ‘ದೇವಿ ಮಹಾತ್ಮೆ’ ಪ್ರಸಂಗದ ಪ್ರಮುಖ ಪಾತ್ರವಾದ ಜಗನ್ಮಾತೆ ಶ್ರೀದೇವಿಯ ವೇಷ ಧರಿಸಿ ಕಂಗೊಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಡ ಮೂಲದ, ‘ತನು ವಿಟ್ಲ’ ಎಂದೇ ಖ್ಯಾತರಾಗಿರುವ ಅರ್ಷಿಯಾ ಖಾನ್ ಅಕ್ಟೋಬರ್ 20ರಂದು ನಡೆದ ಪ್ರದರ್ಶನದಲ್ಲಿ ಅಷ್ಟಭುಜೆ ಶ್ರೀದೇವಿಯಾಗಿ ರಂಗಸ್ಥಳ ಪ್ರವೇಶಿಸಿದರು. ಈಗಾಗಲೇ ಯಕ್ಷಗಾನದ ಪ್ರಥಮ ಮುಸ್ಲಿಂ ಮಹಿಳಾ ಕಲಾವಿದೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಇವರು, ಈ ಹಿಂದೆ ಮಹಿಷಾಸುರ ಸೇರಿದಂತೆ ವಿವಿಧ ಪಾತ್ರಗಳಲ್ಲಿ ಮಿಂಚಿದ್ದರು. ಆದರೆ, ಇದೇ ಮೊದಲ ಬಾರಿಗೆ ದೇವಿಯ ಪಾತ್ರ ನಿರ್ವಹಿಸಿರುವುದು ಕಲಾಪ್ರೇಮಿಗಳಿಂದ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.
ಕದಳಿ ಕಲಾ ಕೇಂದ್ರದ ವತಿಯಿಂದ ದಸರಾ ಅಂಗವಾಗಿ ಕದ್ರಿ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ಆಯೋಜಿಸಲಾಗಿದ್ದ 14ನೇ ವರ್ಷದ ‘ಕದಳಿ ದಶಾಹ’ 10 ದಿನಗಳ ಯಕ್ಷಗಾನ ಕಾರ್ಯಕ್ರಮ ಅಕ್ಟೋಬರ್ 11ರಿಂದ ಆರಂಭವಾಗಿ ಅಕ್ಟೋಬರ್ 20ರಂದು ಮುಕ್ತಾಯಗೊಂಡಿತು. ಸಮಾರೋಪದ ವಿಶೇಷ ಪ್ರದರ್ಶನವಾದ ‘ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ಪ್ರಸಂಗದಲ್ಲಿ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಮೇಳಗಳ ಕಲಾವಿದರು ಭಾಗವಹಿಸಿದ್ದರು.
ಈ ಐತಿಹಾಸಿಕ ರಂಗಸ್ಥಳದಲ್ಲಿ ಅರ್ಷಿಯಾ ಖಾನ್ ಅವರು ಶ್ರೀದೇವಿಯ ಪಾತ್ರ ನಿರ್ವಹಿಸುವ ಮೂಲಕ ಕಲಾ ಲೋಕದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಯಕ್ಷಗಾನ ಪ್ರೇಮಿಗಳು ಈ ಬೆಳವಣಿಗೆಯನ್ನು ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ.
ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ ಪ್ರಕರಣ : ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರ ಬಂಧನ ಮುಂಬೈ: ಬಾಲಿವುಡ್…
ಬೆಂಗಳೂರು – ಮುಂಬೈ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ದಿನಾಂಕ ನಿಗದಿ ..! ಬೆಂಗಳೂರು:ಬೆಂಗಳೂರು ಮತ್ತು ಮುಂಬೈ…
ಮಂಗಳೂರು: ಬೋಳಿಯಾರ್ ಅಪಘಾತ ಪ್ರಕರಣಕ್ಕೆ ತಿರುವು ; ಪಿಕಪ್ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಲು ಮಂಗಳೂರು: ಸೋಮವಾರ ಬೋಳಿಯಾರ್…
ಬಂಟ್ವಾಳ : ವೇಷ ಧರಿಸಿ ಸಂಗ್ರಹಿಸಿದ ಹಣದಿಂದ ಅಸ್ವಸ್ಥ ಯುವಕನಿಗೆ ನೆರವು ; ಪುಟಾಣಿಗಳ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ…
ಮಕ್ಕಳ ಕೈಗೆ ಮೋಟಾರು ವಾಹನಗಳನ್ನು ನೀಡುವುದಕ್ಕೆ ಅದು ಆಟಿಕೆಯಲ್ಲ , ಸಾರ್ವಜನಿಕ ರಸ್ತೆಗಳು ಆಟದ ಮೈದಾನವಲ್ಲ : ಕರ್ನಾಟಕ ಹೈಕೋರ್ಟ್…
ಮುಂಬೈ : ವಸತಿ ಸಮುಚ್ಚಯದಲ್ಲಿ ಅಗ್ನಿ ಅವಘಡ ; 3 ಮಕ್ಕಳು ಸೇರಿ 9 ಮಂದಿಗೆ ಗಾಯ ಮುಂಬೈ: ಇಲ್ಲಿನ…