ಮಂಗಳೂರು: ತೆಂಕುತಿಟ್ಟು ಯಕ್ಷಗಾನದಲ್ಲಿ ಸಿಡಿಲಮರಿ ಎಂದೇ ಖ್ಯಾತಿ ಪಡೆದಿದ್ದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ ಭಂಡಾರಿ (73) ವಿಧಿವಶರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬನ್ನೂರು ನಿವಾಸಿಯಾಗಿದ್ದ ಶ್ರೀಧರ ಭಂಡಾರಿ ಒಂದು ವರ್ಷದ ಹಿಂದೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇಂದು ಮುಂಜಾನೆ ಶ್ರೀಧರ ಭಂಡಾರಿ ನಿಧನರಾಗಿದ್ದು, ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲಾ, ಶಾಂತನಾ, ಪುತ್ರರಾದ ಡಾ ಅನಿಲ, ದೇವಿ ಪ್ರಕಾಶ್ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಜನರಾಗಿದ್ದ ಶ್ರೀಧರ ಭಂಡಾರಿ ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದರಾಗಿದ್ದರು. ಪುಂಡುವೇಷದ ಗಂಡುಗಲಿ, ಧೀಂಗಿಣ ವೀರ ಎಂದೇ ಪ್ರಸಿದ್ಧಿ ಪಡೆದಿದ್ದರು.
ಪುಂಡು ವೇಷಗಳಿಗೆ ಹೆಸರು ಪಡೆದಿದ್ದ ಇವರಿಗೆ ರಂಗಸ್ಥಳದಲ್ಲಿ ಚುರುಕಿನ, ವೇಗದ ನಡೆಯಿಂದ ಅವರಿಗೆ ಸಿಡಿಲಮರಿ ಎಂಬ ಬಿರುದು ಒಲಿದಿತ್ತು. ಒಂದೇ ಬಾರಿಗೆ 200ರಿಂದ 250ರಷ್ಟು ಧೀಂಗಿಣ ಹಾಕುತ್ತಿದ್ದ ಶ್ರೀಧರ ಭಂಡಾರಿ ಅವರು ಬಭ್ರುವಾಹನ, ಅಶ್ವತ್ಥಾಮ, ಕುಶ, ಭಾರ್ಗವ ಮುಂತಾದ ಪಾತ್ರಗಳಲ್ಲಿ ಸೈ ಎನಿಸಿಕೊಂಡಿದ್ದರು.
ಉಡುಪಿ : ಯುವ ಸ್ವಯಂ ಸೇವಕರ ಹುದ್ದೆ: ಅರ್ಜಿ ಆಹ್ವಾನ -Vishwanews24
ಅಜ್ಜನಿಂದ ಪ್ರಭಾವಿತರಾಗಿ ಯಕ್ಷಗಾನದತ್ತ ಆಕರ್ಷಿತರಾಗಿದ್ದ ಇವರು ಕುರಿಯ ವಿಠಲ ಶಾಸ್ತ್ರಿ ಅವರಿಂದ ಶಾಸ್ತ್ರಬದ್ಧವಾಗಿ ಯಕ್ಷಗಾನ ಅಭ್ಯಾಸ ಮಾಡಿದ್ದರು. ಸುಬ್ರಹ್ಮಣ್ಯ ಮೇಳ, ಬಾಳಂಬೆಟ್ಟು ಮೇಳ, ಪುತ್ತೂರು ಮೇಳಗಳಲ್ಲಿ ಸೇವೆ ಸಲ್ಲಿಸಿದ ಶ್ರೀಧರ ಭಂಡಾರಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವೇರ ಮೇಳದಲ್ಲಿ ಸುದೀರ್ಘ 45 ವರ್ಷಗಳ ಕಾಲ ಪ್ರಮುಖ ವೇಷಧಾರಿಯಾಗಿ ಕಲಾ ಸೇವೆಗೈದಿದ್ದರು.
ಉಡುಪಿ : ಆನ್‌ಲೈನ್ ತಂತ್ರಜ್ಞಾನದಡಿ ವಿದ್ಯುತ್ ಬಿಲ್ ಪಾವತಿಗೆ ಅವಕಾಶ -Vishwanews24
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…