ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದರು.
ಭಾಗವತರು ಪದ್ಯ ಹೇಳುತ್ತಾ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣನ ಪಾತ್ರ ಧರಿಸಿದ್ದ ಕಲಾವಿದ ಅಶೋಕ್ ಭಟ್ ಅರ್ಥ ಹೇಳಬೇಕಿತ್ತು. ಈ ವೇಳೆ ಗರಂ ಆದ ಅವರು ಪ್ರೇಕ್ಷಕರಿಗೆ ಬುದ್ಧಿ ಮಾತು ಹೇಳಿದ್ದಾರೆ.
ಇದನ್ನೂ ಓದಿ:
ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೊಂಬರಾಟವೋ? ಇದು ಯಕ್ಷಗಾನವೊ? ಕೋಳಿ ಕಟ್ಟವೋ? ಕಂಬಳವೋ ಎಂದು ವೇದಿಕೆಯಲ್ಲೇ ಪ್ರಶ್ನಿಸಿ ಸಿಟ್ಟು ಹೊರಹಾಕಿದ್ದಾರೆ.
ನಾನು ಚೌಕಿಯಲ್ಲಿದ್ದುಕೊಂಡು ಗಮನಿಸಿದ್ದೇನೆ. ನಾವು ಇಲ್ಲಿ ಯಾಕೆ ಕುಣಿಯುತ್ತಿದ್ದೇವೆ? ಆಟವನ್ನು ಆಡಿಸುವುವವರು ಯಾರು? ಈ ಕ್ಷೇತ್ರದಲ್ಲಿ ನಮ್ಮ ತಿರುಗಾಟ ಎಷ್ಟು ಗೊತ್ತಿದೆಯಾ ನಿಮಗೆ? ಕೋಳಿಕಟ್ಟವಾ ಅಲ್ಲ ಕಂಬಳವಾ? ಯಾರದು? ಏನದು ಶಿಳ್ಳೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಶಿಳ್ಳೆ ಹಾಕಿದ್ದು ಯಾರು? ಹುಚ್ಚರನ್ನು ಬೆಳೆಸಬೇಡಿ. ಕಲಾ ಪ್ರೇಕ್ಷಕರನ್ನು ಬೆಳೆಸಿ. ಆಗದೇ ಇದ್ದರೆ ಬನ್ಸ್ ತಿಂದು ಹೋಗಿ. ಭಾಗವತರ ಕಂಠ ಹಾಳು ಮಾಡುತ್ತೀರಾ? ನಾವು ಯಕ್ಷಗಾನ ಮಾಡಬೇಕೋ? ಏನು ಹೇಳುತ್ತೀರಿ ಎಂದು ಹಿರಿಯರಲ್ಲಿ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:
ಅಶೋಕ್ ಭಟ್ ಅವರ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದಕ್ಕೆ ಪರ, ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಅಶೋಕ್ ಭಟ್ ಅವರನ್ನು ಸಮರ್ಥಿಸಿಕೊಂಡಿದಾರೆ. ಇನ್ನು ಕೆಲವರು ಕಲಾವಿದರು ಮೇಲೆ ಬರಲು ಪ್ರೇಕ್ಷಕರು ಕಾರಣ. ಭಾಗವತರು ಉತ್ತಮ ಪದ್ಯವನ್ನು ಹಾಡಿದಾಗ ಅವರಿಗೆ ಮೆಚ್ಚುಗೆ ಸೂಚಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…