Featured

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ  ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದರು.

ಭಾಗವತರು ಪದ್ಯ ಹೇಳುತ್ತಾ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣನ ಪಾತ್ರ ಧರಿಸಿದ್ದ ಕಲಾವಿದ ಅಶೋಕ್‌ ಭಟ್‌ ಅರ್ಥ ಹೇಳಬೇಕಿತ್ತು. ಈ ವೇಳೆ ಗರಂ ಆದ ಅವರು ಪ್ರೇಕ್ಷಕರಿಗೆ ಬುದ್ಧಿ ಮಾತು ಹೇಳಿದ್ದಾರೆ.

ಇದನ್ನೂ ಓದಿ:

ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ದೊಂಬರಾಟವೋ? ಇದು ಯಕ್ಷಗಾನವೊ? ಕೋಳಿ ಕಟ್ಟವೋ? ಕಂಬಳವೋ ಎಂದು ವೇದಿಕೆಯಲ್ಲೇ ಪ್ರಶ್ನಿಸಿ ಸಿಟ್ಟು ಹೊರಹಾಕಿದ್ದಾರೆ.

ನಾನು ಚೌಕಿಯಲ್ಲಿದ್ದುಕೊಂಡು ಗಮನಿಸಿದ್ದೇನೆ. ನಾವು ಇಲ್ಲಿ ಯಾಕೆ ಕುಣಿಯುತ್ತಿದ್ದೇವೆ? ಆಟವನ್ನು ಆಡಿಸುವುವವರು ಯಾರು? ಈ ಕ್ಷೇತ್ರದಲ್ಲಿ ನಮ್ಮ ತಿರುಗಾಟ ಎಷ್ಟು ಗೊತ್ತಿದೆಯಾ ನಿಮಗೆ? ಕೋಳಿಕಟ್ಟವಾ ಅಲ್ಲ ಕಂಬಳವಾ? ಯಾರದು? ಏನದು ಶಿಳ್ಳೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಶಿಳ್ಳೆ ಹಾಕಿದ್ದು ಯಾರು? ಹುಚ್ಚರನ್ನು ಬೆಳೆಸಬೇಡಿ. ಕಲಾ ಪ್ರೇಕ್ಷಕರನ್ನು ಬೆಳೆಸಿ. ಆಗದೇ ಇದ್ದರೆ ಬನ್ಸ್‌ ತಿಂದು ಹೋಗಿ. ಭಾಗವತರ ಕಂಠ ಹಾಳು ಮಾಡುತ್ತೀರಾ? ನಾವು ಯಕ್ಷಗಾನ ಮಾಡಬೇಕೋ? ಏನು ಹೇಳುತ್ತೀರಿ ಎಂದು ಹಿರಿಯರಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:

ಅಶೋಕ್‌ ಭಟ್‌ ಅವರ ಪ್ರೇಕ್ಷಕರನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಇದಕ್ಕೆ ಪರ, ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಅಶೋಕ್‌ ಭಟ್‌ ಅವರನ್ನು ಸಮರ್ಥಿಸಿಕೊಂಡಿದಾರೆ. ಇನ್ನು ಕೆಲವರು ಕಲಾವಿದರು ಮೇಲೆ ಬರಲು ಪ್ರೇಕ್ಷಕರು ಕಾರಣ. ಭಾಗವತರು ಉತ್ತಮ ಪದ್ಯವನ್ನು ಹಾಡಿದಾಗ ಅವರಿಗೆ ಮೆಚ್ಚುಗೆ ಸೂಚಿಸಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago