Featured

ಮಂಗಳೂರು: ‘ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ – vishwanews24

ಮಂಗಳೂರು: ‘ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

ಮಂಗಳೂರು : “ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.

ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.

ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.

ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

22 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

23 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago