ಮಂಗಳೂರು: ಯುನೈಟೆಡ್ ಕಿಂಗ್ಡಮ್ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.
ಹುದ್ದೆಯ ಅರ್ಹತೆಯ ವಿವರ ಇಂತಿವೆ:
ಬಿ.ಎಸ್ಸಿ ನರ್ಸಿಂಗ್, ಜಿಎನ್ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.
ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ಎಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…