ಮಂಗಳೂರು : ಯುವಕನೊಬ್ಬ ಮದುವೆ ಮಂತ್ರಣ ಪತ್ರಿಕೆಯನ್ನು ಸ್ನೇಹಿತರಿಗೆ ಮತ್ತು ಸಂಬಂಧಿಕರಿಗೆ ನೀಡಲು ಇದೆ ಎಂದು ಮನೆಯಿಂದ ಹೋದವ ಕಾಣೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಾಣೆಯಾದ ಯುವಕನನ್ನು ರಕ್ಷಣ್ ಜೆ.ಕೆ (32) ಎಂದು ಗುರುತಿಸಲಾಗಿದೆ. ಡಿಸೆಂಬರ್ 6 ರಂದು ತನ್ನ ತಾಯಿಯ ಕಾರಿನಲ್ಲಿ ಹೊರಟು ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಆಮಂತ್ರಣ ಪತ್ರ ನೀಡಿ ಬರುತ್ತೇನೆಂದು ಹೇಳಿ ಹೋದವರು ಕಾಣೆಯಾಗಿರುವ ಬಗ್ಗೆ ಪ್ರಕರಣ ದಕ್ಷಿಣ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ. ಡಿಸೆಂಬರ್ 6 ರಂದು ರಾತ್ರಿ 10:30 ಗಂಟೆಗೆ ನಗರದ ಟೌನ್ಹಾಲ್ ಬಳಿ ಕಾರು ಪತ್ತೆಯಾಗಿರುತ್ತದೆ.
ಕಾಣೆಯಾದವರ ಚಹರೆ: 5.8 ಅಡಿ ಎತ್ತರ, ಸಧೃಡ ಶರೀರ, ಗೋಧಿ ಮೈ ಬಣ್ಣ, ಕಪ್ಪು ಕೂದಲು, ತಿಳಿ ನೀಲಿ ಬಣ್ಣದ ಉದ್ದ ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ತುಳು ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ.
ಯುವಕ ತನಗೆ ಮದುವೆ ಇಷ್ಟವಿಲ್ಲ ಎಂದು ಮನೆಯವರ ಬಳಿ ಹೇಳಿದ್ದರೂ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಶನಿವಾರ ಮನೆಯಿಂದ ತೆರಳಿದ್ದ ಅವರು ಮಧ್ಯಾಹ್ನದ ರೈಲಿನಲ್ಲಿ ಚೆನ್ನೈಗೆ ಹೋಗಿದ್ದಾರೆ. ಸೋಮವಾರ ಮೊಬೈಲ್ ಕರೆ ಸ್ವೀಕರಿಸಿದ್ದು, ತಾನು ಚೆನ್ನೈಯಲ್ಲಿರುವುದಾಗಿ ಮನೆಯವರಿಗೆ ತಿಳಿಸಿದ್ದಾರೆ. ಕೂಡಲೇ ಪೊಲೀಸರು ಲೋಕೇಷನ್ ಸರ್ಚ್ ಮಾಡಿದಾಗ ಚೆನ್ನೈಯಲ್ಲಿರುವುದು ದೃಢಪಟ್ಟಿದೆ. ಮರಳಿ ಮಂಗಳೂರಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…