Featured

ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ – vishwanews24

ಮಂಗಳೂರು: ರಕ್ಷಣಾ ಸಚಿವಾಲಯ ಸಲಹಾ ಸಮಿತಿಯ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ಕ್ಯಾ. ಚೌಟ ಕೂಡಾ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯೂ ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನದ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಸೂಕ್ತ ಮಾರ್ಗದರ್ಶನ ಕೊಡಲಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ “ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ” ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

13 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

15 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago