ಮಂಗಳೂರು,: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ದುಬೈಯಿಂದ ಬಂದಿಳಿದ ವಿಮಾನ ರನ್ ವೇಯಿಂದ ಜಾರಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಲೋಪದ ಕುರಿತು ಹಾಗು ಘಟನೆಯ ಸಮಗ್ರ ಉನ್ನತ ತನಿಖೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.
ಈ ಸಂಬಂಧ ನಾಗರೀಕ ವಿಮಾನಯಾನ ಮಹಾ ನಿರ್ದೇಶಕ (ಡಿಜಿಸಿಎ)ರೊಂದಿಗೆ ಹಾಗೂ ಸಚಿವಾಲಯದೊಂದಿಗೆ ಮಾತನಾಡಿರುವ ಸಚಿವರು, ಈ ಘಟನೆ ಪೈಲಟ್ ಅಥವಾ ವಿಮಾನದ ದೋಷದಿಂದಾಗಿದೆಯೇ, ಏರ್ ಪೋರ್ಟ್ ವ್ಯವಸ್ಥೆಯಲ್ಲಿ ಏನಾದರೂ ಕೊರತೆಯುಂಟಾಗಿದೆಯೇ ಎಂಬುದರ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕು. ಪ್ರಯಾಣಿಕರ ಸುರಕ್ಷಿತ ಪ್ರಯಾಣಕ್ಕೆ ಉತ್ಕೃಷ್ಟ ಕಾಳಜಿ ವಹಿಸಬೇಕು, ಕೂಡಲೇ ಈ ಬಗ್ಗೆ ಸ್ಪಂದಿಸಬೇಕು ಎಂದು ಸಚಿವ ಖಾದರ್ ಆಗ್ರಹಿಸಿದ್ದಾರೆ.
ದುಬೈನಿಂದ ಮಂಗಳೂರಿಗೆ ಸುಮಾರು 6 ಗಂಟೆಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಐಎಕ್ಸ್ 814 ವಿಮಾನ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಸಂದರ್ಭ ರನ್ ವೇ ಬಿಟ್ಟು ಹೊರಗೆ ಜಾರಿದ್ದು, ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…