Featured

ಮಂಗಳೂರು : ರಬ್ಬರ್‌ ಟ್ಯಾಪಿಂಗ್‌ ವೇಳೆ ಎದೆಗೆ ಕತ್ತಿತಾಗಿ ಮಹಿಳೆ ಸಾವು – Vishwanews24

ಮಂಗಳೂರು : ರಬ್ಬರ್‌ ಟ್ಯಾಪಿಂಗ್‌ ವೇಳೆ ಎದೆಗೆ ಕತ್ತಿತಾಗಿ ಮಹಿಳೆ ಸಾವು

ಮಂಗಳೂರು: ದಕ್ಷಿಣ ಕನ್ನಡ ಕಡಬ ತಾಲೂಕಿನ ಎಡಮಂಗಲದಲ್ಲಿ ರಬ್ಬರ್‌ ಟ್ಯಾಪಿಂಗ್‌ ಮಾಡುವ ವೇಳೆ ಎದೆಗೆ ಕತ್ತಿ ತಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ(37 ವ.) ಎಂಬವರು ಬೆಳ್ಳಂಬೆಳಗ್ಗೆ 6.30 ಗಂಟೆ ಹೊತ್ತಿಗೆ ತನ್ನ ಗಂಡನ ಜೊತೆ ತಮ್ಮದೇ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದರು.

ಟ್ಯಾಪಿಂಗ್ ಮಾಡುತ್ತಾ ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಬೀಳುವಾಗ ಕೈಯಲ್ಲಿದ್ದ ಹರಿತವಾದ ಟ್ಯಾಪಿಂಗ್ ಕತ್ತಿ ಎದೆಯೊಳಗೆ ಹೊಕ್ಕಿದೆ. ಕತ್ತಿ ನುಗ್ಗಿದ ರಭಸಕ್ಕೆ ಕತ್ತಿಯ ಕೈ ಹಿಡಿಯುವ ಜಾಗ ತುಂಡಾಗಿದೆ.

ಗೀತಾ ಅವರು ಕೂಗಿದಾಗ ಗಂಡ ಓಡಿ ಬಂದಿದ್ದು ಕೈ ಭಾಷೆಯಲ್ಲೇ ಕತ್ತಿ ನುಗ್ಗಿದ ಜಾಗ ತೋರಿಸಿದರು ಎನ್ನಲಾಗಿದೆ. ಗಂಡ ಕತ್ತಿಯನ್ನು ಎಳೆದು ತೆಗೆದಾಗ ಗೀತಾ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೃತ ಗೀತಾ ಅವರಿಗೆ 8 ನೇ ತರಗತಿ ಓದುತ್ತಿರುವ ಪುತ್ರ ಹಾಗೂ ಪುತ್ರಿ ಎಲ್.ಕೆ.ಜಿ ಅಭ್ಯಾಸ ನಡೆಸುತ್ತಿದ್ದಾರೆ. ಈ ಕುರಿತು ಮೃತರ ಗಂಡ ಶಿವರಾಮ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

17 minutes ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

35 minutes ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

2 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

2 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago