ಮಂಗಳೂರು: ಇಲ್ಲಿನ ರಸ್ತೆಯಲ್ಲಿ ಕೆಲ ಯುವಕರು ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಕೇಸ್ ದಾಖಲಿಸಿದ್ದಕ್ಕಾಗಿ ಪೊಲೀಸ್ ಇನ್ಸ್ಪೆಕ್ಟರ್‌ಗೆ ಕಡ್ಡಾಯ ರಜೆಯ ಶಿಕ್ಷೆ ನೀಡಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದು, ಬಿ ರಿಪೋರ್ಟ್ ಮಾಡಿ ಕೇಸ್ ರದ್ದು ಮಾಡಿದ್ದಾರೆ. ಕೇಸ್ ದಾಖಲಿಸಿದ್ದಕ್ಕೆ ಮುಸ್ಲಿಮರ ಆಕ್ಷೇಪ ಹಿನ್ನೆಲೆ ಕದ್ರಿ ಪಿಐ ಸೋಮಶೇಖರ್‌ಗೆ ಕಡ್ಡಾಯ ರಜೆ ಶಿಕ್ಷೆ ನೀಡಲಾಗಿದೆ. ಪೊಲೀಸರ ವಿರುದ್ಧ ತನಿಖೆ ಮಾಡಲು ಎಸಿಪಿ ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಮಂಗಳೂರಿನ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ಕೆಲ ಅನ್ಯಕೋಮಿನ ಯುವಕರು ನಮಾಜ್ ಮಾಡಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆಯುಂಟಾದ ಹಿನ್ನೆಲೆ ಕದ್ರಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ (ಸುಮೊಟೋ) ದಾಖಲಿಸಿಕೊಂಡಿದ್ದರು. ಐಪಿಸಿ ಸೆಕ್ಷನ್ 341 (ಅಕ್ರಮ ಪ್ರತಿಬಂಧಕ್ಕಾಗಿ ದಂಡನೆ), 283 (ಸಾರ್ವಜನಿಕ ರಸ್ತೆಯಲ್ಲಿ ಅಡ್ಡಿ) ,143 (ವಿಧಿವಿರುದ್ಧ ಕೂಟದ ಸದಸ್ಯ) ,149 (ಏಕೋದ್ದೇಶವನ್ನು ಈಡೇರಿಸುವಲ್ಲಿ ಮಾಡಲಾದ ಅಪರಾಧದ ಬಗ್ಗೆ ವಿಧಿವಿರುದ್ಧ ಕೂಟದ ಪ್ರತಿಯೊಬ್ಬ ಸದಸ್ಯನು ತಪ್ಪಿತಸ್ಥನಾಗಿರುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಕರಾವಳಿಯ ಕಾಂಗ್ರೆಸ್ ಅಲ್ಪಸಂಖ್ಯಾತರು, ಮುಸ್ಲಿಂ ವಲಯ ಮತ್ತು ಪ್ರಗತಿಪರರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…