Featured

ಮಂಗಳೂರು : ರಸ್ತೆಯಲ್ಲಿ ನಮಾಜ್​ – ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ : ರಮಾನಾಥ ರೈ – vishwanews24

ಮಂಗಳೂರು : ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವವರ ಮೇಲೆ ಕಾನೂನು ಕ್ರಮ ಆಗಬೇಕು : ಬಿ.ರಮಾನಾಥ ರೈ ಒತ್ತಾಯ

ಮಂಗಳೂರು, : ಕಂಕನಾಡಿ ಮಸೀದಿಯ ಹೊರಗಡೆಯದ್ದು ಅನಗತ್ಯ ವಿಚಾರ. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತವೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ, ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕಾನೂನು ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಜಿಲ್ಲೆಯ ಸೌಹಾರ್ದ ಕದಡುವ ಕಾನೂನುಬಾಹಿರ ಕೆಲಸಗಳು ಆದಾಗ ಸುಮೋಟೋ ಪ್ರಕರಣ ದಾಖಲಿಸುವುದು ಸಹಜ. ಆದರೆ ಈ ರೀತಿಯ ಸಣ್ಣ ವಿಚಾರದಲ್ಲಿ ಸಂಬಂಧಪಟ್ಟವರನ್ನು ಕರೆಸಿ ಬುದ್ಧಿವಾದ ಹೇಳುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕಿತ್ತು ಎಂದರು.

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಅಶ್ರಫ್ ಕೆ., ಅಪ್ಪಿ, ಇಬ್ರಾಹೀಂ ಕೋಡಿಜಾಲ್, ಶುಭೋದಯ ಆಳ್ವ, ಶಶಿಕಲಾ, ದೀಪಕ್ ಪೂಜಾರಿ ಉಪಸ್ಥಿತರಿದ್ದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

5 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago