ಮಂಗಳೂರು : ರಸ್ತೆ ಅಪಘಾತ- ಮಹಿಳೆ ಸಾವು – vishwanews24

Featured, ದಕ್ಷಿಣ ಕನ್ನಡ

ಮಂಗಳೂರು:ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಸವಾರೆ ಮಹಿಳೆ ಸಾವು

ಮಂಗಳೂರು: ನಗರದ ಬಂದರ್ ಧಕ್ಕೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಶುಕ್ರವಾರ ಶಾಲೆಗೆ ಶಾಲೆಗೆ ತೆರಳುತ್ತಿದ್ದಾಗ ಶಾಹಿದಾ ಅವರಿಗೆ ಅನಾರೋಗ್ಯ ಕಾಡಿದ್ದು, ಅಲ್ಲಿಂದ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಸ್ರೋ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹ ಯಶಸ್ವಿ ಉಡಾವಣೆ – vishwanews24

Leave a Reply