ಮಂಗಳೂರು : ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಸಮೀಪ ಗುರುವಾರ ಮುಂಜಾನೆ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ನಂದಿಗುಡ್ಡ ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಕಾರು ಬೆಳಿಗ್ಗೆ ಸುಮಾರು 6.45ರ ವೇಳೆಗೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸಾರ್ವಜನಿಕರು ಧಾವಿಸಿ ಕಾರನ್ನು ಸರಿಯಾಗಿ ತಿರುಗಿಸಿ ನಿಲ್ಲಿಸಲು ಸಹಾಯ ಮಾಡಿದರು. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು, ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ. ಅದಾಗ್ಯೂ ಅಪಘಾತದ ಬಳಿಕ ಚಾಲಕ ಸ್ಥಳದಿಂದ ಹೊರಟುಹೋಗಿದ್ಧಾನೆ ಎನ್ನಲಾಗಿದೆ. 112 ತುರ್ತು ಸಹಾಯವಾಣಿಗೆ ಮಾಹಿತಿ ಬಂದ ಸುಮಾರು 15 ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…