ಮಂಗಳೂರು: ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ (23) ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದರು ಎನ್ನಲಾಗಿದೆ.
ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…