Featured

ಮಂಗಳೂರು:  ರಾಜಕೀಯ ಮೈಲೇಜಿಗೋಸ್ಕರ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ : ಅಣ್ಣಾಮಲೈ ಆರೋಪ – vishwanews24

ನಕ್ಸಲ್ ಶರಣಾಗತಿ, ವಿಕ್ರಮ್ ಗೌಡನ ಎನ್ಕೌಂಟರ್ ಬಗ್ಗೆ ಅನುಮಾನವಿದೆ : ಅಣ್ಣಾಮಲೈ

ಮಂಗಳೂರು: ಕರ್ನಾಟಕದ ಇತ್ತೀಚಿಗೆ ನಡೆದ ನಕ್ಸಲ್ ಶರಣಾಗತಿ, ಎನ್ಕೌಂಟರ್ ಬಗ್ಗೆ ಅನುಮಾನ ಮೂಡುತ್ತಿದೆ. ಇಲ್ಲಿ ರಾಜಕೀಯ ಮೈಲೇಜಿಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿಂದು ಮಾತನಾಡಿದ ಅವರು, ನಕ್ಸಲ್ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭ ಕೆಲವೊಂದು ಶರತ್ತುಗಳಿರುತ್ತವೆ. ಆದರೆ ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿಯ ಬಗ್ಗೆ ಸ್ವಲ್ಪ ಅನುಮಾನ ಮೂಡುತ್ತಿದೆ. ನಕ್ಸಲ್ ಮುಖಂಡ ವಿಕ್ರಮ್ ಗೌಡನ ಎನ್ಕೌಂಟರ್ ನಲ್ಲೂ ಅನುಮಾನವಿದೆ. ಎನ್ಕೌಂಟರ್ ಆದ ತಕ್ಷಣ ನಕ್ಸಲ್ ಶರಣಾದರು ಎಂದು ಸರಕಾರ ಹೇಳುತ್ತಿದೆ. ನಕ್ಸಲರು ಶರಣಾಗುವಂತೆ ಯಾರು ಮಾತುಕತೆ ನಡೆಸಿದರು ಎಂಬುದು ತಿಳಿದಿಲ್ಲ. ನಕ್ಸಲ್ ತಂಡದೊಳಗಡೆ ಇರುವ ಆಂತರಿಕ ರಾಜಕೀಯವನ್ನು ಕಾಂಗ್ರೆಸ್ ದುರ್ಬಳಕೆ ಮಾಡುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಣ್ಣಾಮಲೈ ಹೇಳಿದರು.

ಈ ಹಿಂದೆ ನಾನು ಚಿಕ್ಕಮಂಗಳೂರು ಎಸ್ಪಿಯಾಗಿದ್ದ ಸಂದರ್ಭ ನಕ್ಸಲರು ಶರಣಾಗಿದ್ದರು. ನಕ್ಸಲರ ಶರಣಾಗತಿ ಪ್ರಕ್ರಿಯೆಯಲ್ಲಿ ನಾನು ಭಾಗವಹಿಸಿದ್ದೆ. ನಿಯಮಗಳ ಪ್ರಕಾರ ಜಿಲ್ಲಾಧಿಕಾರಿ ಮತ್ತು ಎಸ್ಪಿಯ ಎದುರು ನಕ್ಸಲರು ಶರಣಾಗಬೇಕು. ಆನಂತರ ಬೇರೆ ಪ್ರಕ್ರಿಯೆಗಳು ನಡೆಯುತ್ತವೆ. ಇಲ್ಲಿ ರಾಜಕೀಯ ಮೈಲೇಜ್ ಗೋಸ್ಕರ ಶರಣಾಗತಿ ಪ್ರಕ್ರಿಯೆ ನಡೆಸಲಾಗಿದೆ. ನಕ್ಸಲ್ ಬೆಂಬಲಿಗರು ಸರಕಾರದ ಮೇಲೆ ಪ್ರಭಾವ ಬೀರಿದ್ದಾರೆ. ನಾಗರಿಕ ಸಮಾಜದ ಮೇಲೂ ಇವರು ಪ್ರಭಾವ ಬೀರಲಿದ್ದಾರೆ ಎಂದು ಅವರು ಆರೋಪಿಸಿದರು.

ನಕ್ಸಲರು ಶರಣಾದಾಗ ಜನರಿಗೆ ವಿಶ್ವಾಸ ಬರಬೇಕು. ನಕ್ಸಲರ ಶರಣಾಗತಿಯ ಬಗ್ಗೆ ಜನರಿಗೆ ವಿಶ್ವಾಸವಿಲ್ಲ. ಶರಣಾಗತಿಯ ಬಗ್ಗೆ ಗೃಹಸಚಿವರೇ ಮಾಹಿತಿಯ ಕೊರತೆಯಿದ್ದ ಹಾಗೆ ಉಲ್ಟಾ-ಪಲ್ಟಾ ಮಾತನಾಡುತ್ತಾರೆ. ಶರಣಾದ ನಕ್ಸಲರು ನಾಗರಿಕ ಸಮಾಜದ ಮೇಲೆ ಪ್ರಭಾವ ಬೀರುವ ಅಪಾಯವಿದೆ ಎಂದು ಅಣ್ಣಾಮಲೈ ಎಂದು ಹೇಳಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

14 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago