Featured

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಥವಾ ಕೇಳಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿಲ್ಲ. ಜನಸಾಮಾನ್ಯರ ಸಮಸ್ಯೆಗಳನ್ನು ನೋಡಿ ಅದಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತದೆ ಎಂದು ಸಚಿವ ಯು. ಟಿ. ಖಾದರ್ ಹೇಳಿದರು.

ರವಿವಾರ ನಗರದಲ್ಲಿ ಮಾಧ್ಯಮ ದವರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಬರ ಪರಿಸ್ಥಿತಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿರುವ ಬಗ್ಗೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ವೈಮಾನಿಕ ಸಮೀಕ್ಷೆ ಮಾಡಿದಾಗ ಸಂಪೂರ್ಣ ಚಿತ್ರಣ ಲಭ್ಯವಾಗುತ್ತದೆ. ಎಲ್ಲೆಲ್ಲಿ ಎಷ್ಟು ಬರ ಪರಿಸ್ಥಿತಿ, ನೀರಿನ ಸ್ಥಿತಿಗತಿ ಹೇಗಿದೆ ಎಂದು ತಿಳಿಯುತ್ತದೆ. ನೆಲದಿಂದ ಹೋದರೆ ಬರ ಪ್ರದೇಶಗಳನ್ನು ಎಷ್ಟು ನೋಡಬಹುದು. ಆದರೂ ಸಿಎಂ ಬೇರೆ ಬೇರೆ ಕಡೆಗಳಿಗೆ ಹೋಗಿ ಪರಿಶೀಲನೆ ಮಾಡಿ ರೈತರಿಗೆ ಸಾಂತ್ವನ ಹೇಳಿದ್ದಾರೆ. ಬಿಜೆಪಿಯವರಿಗೆ ಅಷ್ಟೂ ಮಾಹಿತಿ ಇಲ್ವಾ ಎಂದು ಪ್ರಶ್ನಿಸಿದರು.

ರೈತರಿಗೆ ಮನ್ನಣೆ ಕೊಟ್ಟು ಬರ ಪರಿಶೀಲನೆಗೆ ಹೋಗಿದ್ದಕ್ಕೆ ಪ್ರಶಂಸೆ ವ್ಯಕ್ತಪಡಿಸಬೇಕೇ ಹೊರತು ರಾಜಕೀಯ ಮಾಡಬಾರದು. ನಿಮ್ಮ ಸಲಹೆ ಸೂಚನೆ ಏನಿದೆ ಅದನ್ನು ಕೊಡಿ. ಬೇಕಾದರೆ ನೀವೂ ಜತೆಯಲ್ಲಿ ಬನ್ನಿ ನಿಮ್ಮನ್ನೂ ಕರೆದುಕೊಂಡು ಹೋಗುತ್ತೇವೆ ಎಂದರು.

 

Vishwa News 24

Recent Posts

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು – vishwanews24

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…

44 minutes ago

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ – vishwanews24

ಮಂಗಳೂರು: ಹೋಮ್ ಸ್ಟೇ ಹೆಸರಿನಲ್ಲಿ ಲಾಡ್ಜ್‌ಗಳಿಗೆ ಅವಕಾಶವಿಲ್ಲ: ಸಚಿವ ಕೆ.ಜೆ. ಜಾರ್ಜ್ ಮಂಗಳೂರು: ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ…

56 minutes ago

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…

1 hour ago

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…

1 hour ago

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ ; ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ – vishwanews24

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ: ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆಯಲ್ಲಿ…

1 hour ago

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ…

2 hours ago