ಮಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ವಿಚಾರದಲ್ಲಿ ಶಾಸಕ ಯು ಟಿ ಖಾದರ್ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
ನ.11 ರ ಶನಿವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಖಾದರ್, ”ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಸಾಂಸ್ಕೃತಿಕ ಕಲೆಯಾದ ಯಕ್ಷಗಾನ ಮತ್ತು ಭರತನಾಟ್ಯವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಸಂಸ್ಕೃತಿ ಪರಂಪರೆಗಳ ಬಗ್ಗೆ ಮಾತನಾಡಿ ಅಧಿಕಾರಕ್ಕೆ ಬಂದವರು ಈಗ ಎಲ್ಲಿದ್ದಾರೆ? ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
ಈ ಭಾಗದವರೇ ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾಗಿದ್ದಾರೆ.100 ವಯಸ್ಸಿನ ಬಾಬು ರೈ ಅವರನ್ನು ನೀವು ಏಕೆ ಪರಿಗಣಿಸಿಲ್ಲ. ಇಲ್ಲಿನ ಸಂಸ್ಕೃತಿಯನ್ನು ಗಣನೆಗೆ ತೆಗೆದುಕೊಳ್ಳದೆ ಜಿಲ್ಲೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯ ಸರ್ಕಾರಗಳು ಇಂಧನ ಬೆಲೆ ಇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಬಿಜೆಪಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅಲ್ಪ ಪ್ರಮಾಣದಲ್ಲಿ ಇಳಿಸಿದೆ. ಜನ ಆಕ್ರೋಶದ ದೊಣ್ಣೆಯಿಂದ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ನಿರಂತರ ಇಂಧನ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರನ್ನು ಸಮಾಧಾನ ಪಡಿಸಲು ಮುಂದಾಗಿದ್ದಾರೆ. ಪ್ರತಿ ಲೀಟರ್ ಪೆಟ್ರೋಲ್ ಗೆ 70 ರೂಪಾಯಿ ತಲುಪಲು 70 ವರ್ಷಗಳೇ ಬೇಕಾಯಿತು. ಆದರೆ ಬಿಜೆಪಿ ಏಳು ವರ್ಷ ತೆಗೆದುಕೊಂಡಿತು.
ಇಂಧನ ಬೆಲೆ ಇಳಿಕೆ ತಮ್ಮ ನಿಯಂತ್ರಣದಲ್ಲಿಲ್ಲ ಎಂದು ಹಣಕಾಸು ಸಚಿವರು ಹೇಳಿದ್ದಾರೆ. ಚುನಾವಣೆಯಲ್ಲಿ ಸೋತ ನಂತರ ಬೆಲೆ ಇಳಿಸಿದರು. ಇದು ಆಡಳಿತಾರೂಢ ಬಿಜೆಪಿ ಸರ್ಕಾರದ ಸೋಲು ಮತ್ತು ಶ್ರೀಸಾಮಾನ್ಯನ ಗೆಲುವು. ಗೃಹಬಳಕೆಯ ಅಗತ್ಯ ವಸ್ತುಗಳ ಬೆಲೆ ಇನ್ನೂ ತಗ್ಗಿಲ್ಲ. ಈ ವಿಚಾರದಲ್ಲಿ ಸರ್ಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಆದೇಶ ಹೊರಡಿಸಲಿ. ಅವರು ಕಾರ್ಪೊರೇಟ್ ವಲಯಗಳ ಹೊರೆಯನ್ನು ಕಡಿಮೆ ಮಾಡಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…