ಮಂಗಳೂರು : ರಾಜ್ಯ ಸರ್ಕಾರ ಜನರ ಜೀವನದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದು, ತಕ್ಷಣ ವಿಕೇಂಡ್ ಕರ್ಫ್ಯೂ ಹಿಂಪಡೆಯುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ.
ನಗರದ ಜ. 17 ರಂದು ಸೋಮವಾರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಖಾದರ್ “ಕೋವಿಡ್ ರೂಪಾಂತರಿ ಓಮಿಕ್ರಾನ್‌ನಿಂದ ಜನರಿಗೆ ಯಾವುದೇ ಅಪಾಯವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚೆನ್ನಾಗಿ ತಿಳಿದಿದ್ದರೂ, ರಾಜ್ಯ ಸರ್ಕಾರ ಅನಗತ್ಯವಾಗಿ ಜನರಲ್ಲಿ ಭಯವನ್ನು ಹುಟ್ಟುಹಾಕುತ್ತಿದೆ. ಓಮಿಕ್ರಾನ್‌ನಿಂದಾಗಿ ಸಾವನ್ನಪ್ಪಿರುವ ಬಗ್ಗೆ ಇದುವರೆಗೆ ಒಂದೇ ಒಂದು ವರದಿಯನ್ನು ಆರೋಗ್ಯ ಇಲಾಖೆ ನೀಡಿಲ್ಲ. ವಾರಾಂತ್ಯದ ಕರ್ಫ್ಯೂ ಕುರಿತು ರಾಜ್ಯ ಸರ್ಕಾರ ವೈಜ್ಞಾನಿಕ ನಿರ್ಧಾರ ಕೈಗೊಂಡಿಲ್ಲ ಆದರೆ ಮೇಕೆದಾಟು ಪಾದಯಾತ್ರೆ ಹಳಿತಪ್ಪಿಸುವ ರಾಜಕೀಯ ನಿರ್ಧಾರವಾಗಿದೆ. ವಾರಾಂತ್ಯದ ಕರ್ಫ್ಯೂ ಜನರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ವಿಶೇಷವಾಗಿ ದಿನಗೂಲಿ ಕಾರ್ಮಿಕರು, ತರಕಾರಿ ಮಾರಾಟಗಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ವಾರಾಂತ್ಯದ ಕರ್ಫ್ಯೂನಿಂದ ಅನೇಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.
ಇನ್ನು “ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
ವೆನ್‌ಲಾಕ್‌ನಲ್ಲಿ ಲ್ಯಾಬ್ ಸಿಬ್ಬಂದಿ ಕೊರತೆಯಿಂದ ಒತ್ತಡ ಎದುರಿಸುತ್ತಿದೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಂತ್ರಜ್ಞರಿಲ್ಲ, ಅದನ್ನು ಒದಗಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…