Featured

ಮಂಗಳೂರು: ರಾಜ್ಯ ಸರ್ಕಾರ ಜನರ ಜೀವನದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದು, ತಕ್ಷಣ ವಿಕೇಂಡ್ ಕರ್ಫ್ಯೂ ಹಿಂಪಡೆಯಬೇಕು : ಖಾದರ್ ಒತ್ತಾಯ -Vishwanews24

ಮಂಗಳೂರು: ರಾಜ್ಯ ಸರ್ಕಾರ ಜನರ ಜೀವನದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದು, ತಕ್ಷಣ ವಿಕೇಂಡ್ ಕರ್ಫ್ಯೂ ಹಿಂಪಡೆಯಬೇಕು : ಖಾದರ್ ಒತ್ತಾಯ -Vishwanews24

ಮಂಗಳೂರು : ರಾಜ್ಯ ಸರ್ಕಾರ ಜನರ ಜೀವನದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದು, ತಕ್ಷಣ ವಿಕೇಂಡ್ ಕರ್ಫ್ಯೂ ಹಿಂಪಡೆಯುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ.

ನಗರದ ಜ. 17 ರಂದು ಸೋಮವಾರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಖಾದರ್ “ಕೋವಿಡ್ ರೂಪಾಂತರಿ ಓಮಿಕ್ರಾನ್‌ನಿಂದ ಜನರಿಗೆ ಯಾವುದೇ ಅಪಾಯವಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಚೆನ್ನಾಗಿ ತಿಳಿದಿದ್ದರೂ, ರಾಜ್ಯ ಸರ್ಕಾರ ಅನಗತ್ಯವಾಗಿ ಜನರಲ್ಲಿ ಭಯವನ್ನು ಹುಟ್ಟುಹಾಕುತ್ತಿದೆ. ಓಮಿಕ್ರಾನ್‌ನಿಂದಾಗಿ ಸಾವನ್ನಪ್ಪಿರುವ ಬಗ್ಗೆ ಇದುವರೆಗೆ ಒಂದೇ ಒಂದು ವರದಿಯನ್ನು ಆರೋಗ್ಯ ಇಲಾಖೆ ನೀಡಿಲ್ಲ. ವಾರಾಂತ್ಯದ ಕರ್ಫ್ಯೂ ಕುರಿತು ರಾಜ್ಯ ಸರ್ಕಾರ ವೈಜ್ಞಾನಿಕ ನಿರ್ಧಾರ ಕೈಗೊಂಡಿಲ್ಲ ಆದರೆ ಮೇಕೆದಾಟು ಪಾದಯಾತ್ರೆ ಹಳಿತಪ್ಪಿಸುವ ರಾಜಕೀಯ ನಿರ್ಧಾರವಾಗಿದೆ. ವಾರಾಂತ್ಯದ ಕರ್ಫ್ಯೂ ಜನರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ವಿಶೇಷವಾಗಿ ದಿನಗೂಲಿ ಕಾರ್ಮಿಕರು, ತರಕಾರಿ ಮಾರಾಟಗಾರರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ವಾರಾಂತ್ಯದ ಕರ್ಫ್ಯೂನಿಂದ ಅನೇಕರು ಕೆಲಸ ಕಳೆದುಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನು “ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ವೆನ್‌ಲಾಕ್‌ನಲ್ಲಿ ಲ್ಯಾಬ್ ಸಿಬ್ಬಂದಿ ಕೊರತೆಯಿಂದ ಒತ್ತಡ ಎದುರಿಸುತ್ತಿದೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಂತ್ರಜ್ಞರಿಲ್ಲ, ಅದನ್ನು ಒದಗಿಸಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

6 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

12 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

14 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

15 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

15 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

15 hours ago