ಮಂಗಳೂರು,: ರಾಜ್ಯ ಹೆದ್ದಾರಿಗಳಲ್ಲಿ ಇನ್ನು ಮುಂದೆ ಟೋಲ್ ಸಂಗ್ರಹಿಸುವ ಪ್ರಸ್ತಾಪವನ್ನು ವಿರೋಧಿಸುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ತಿಳಿಸಿದೆ.
ಪತ್ರಿಕಾ ಪ್ರಕಟನೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೇಕಾಬಿಟ್ಟಿ ಟೋಲ್ ವಸೂಲಿಯಿಂದ ಕಂಗಾಲಾಗಿರುವ ವಾಹನ ಮಾಲಕರು ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿಯೂ ಟೋಲ್ ಕಟ್ಟಬೇಕಿರುವ ಪ್ರಸ್ತಾಪಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಹಾದು ಹೋಗುವ ರಾ. ಹೆ. 75ರಲ್ಲಿ ಬಿಸಿರೋಡ್‌ನ ಬ್ರಹ್ಮರಕೂಟ್ಲು, ರಾಷ್ಟರೀಯ ಹೆದ್ದಾರಿ 66ರಲ್ಲಿ ಎನ್‌ಐಟಿಕೆ ಸುರತ್ಕಲ್, ಹಾಗೂ ನವಯುಗ ಖಾಸಗಿ ಸಂಸ್ಥೆ ನಿರ್ವಹಿಸುವ ತಲಪಾಡಿ ಹಾಗೂ ಉಡುಪಿ ಜಿಲ್ಲೆಯ ಹೆಜಮಾಡಿ ಸಾಸ್ತಾನದಲ್ಲಿ ಟೋಲ್ ಸಂಗ್ರಹ ಜನರ ಸಿಟ್ಟಿಗೆ ಗುರಿಯಾಗಿದೆ. ಇದಲ್ಲದೆ, ರಾಜ್ಯ ಹೆದ್ದಾರಿಗಳಿಗೂ ಟೋಲ್ ಶುಲ್ಕ ಸಂಗ್ರಹಿಸಲು ಬಿಡ್ ಆಹ್ವಾನ ಮಾಡಿರುವ ಕುರಿತಂತೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ : ಆಪರೇಷನ್ ಕಮಲ ಆಮಿಷ ಪ್ರಕರಣ : ಸಿಎಂ ಬಿಎಸ್ ವೈ ವಿರುದ್ದ ತನಿಖೆಗೆ ಸಮ್ಮತಿ ನೀಡಿದ ಹೈಕೋರ್ಟ್ -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…