ಮಂಗಳೂರು :ದುಬೈನಿಂದ ಮಂಗಳೂರಿಗೆ ಬುಧವಾರ ರಾತ್ರಿ ಬಂದಿಳಿಯಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿ ರಾತ್ರಿ ಇಡೀ ವಿಮಾನದಲ್ಲೇ ಕಾಲಕಳೆಯುವಂತಾದ ಘಟನೆ ವರದಿಯಾಗಿದೆ.
ಬುಧವಾರ ರಾತ್ರಿ 11:40 ವಿಮಾನ ಹಾರಾಟ ಆರಂಭಿಸಲಿದೆ ಎಂದು, ಪ್ರಯಾಣಿಕರೆಲ್ಲರನ್ನು ವಿಮಾನದಲ್ಲಿ ಕುಳ್ಳಿರಿಸಲಾಗಿತ್ತು. ಆದರೆ ತಾಸುಗಟ್ಟಲೆ ಕಾದರೂ ದುಬೈಯಿಂದ ಹೊರಡಬೇಕಿದ್ದ ವಿಮಾನ ಹಾರಾಟ ಆರಂಭಿಸಲಿಲ್ಲ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಿಮಾನವೂ ಗುರುವಾರ ಮಂಜಾನೆವರೆಗೂ ವಿಮಾನವೂ , ನಿಲ್ದಾಣದಲ್ಲೇ ಬಾಕಿಯಾಗಿತ್ತು. ಇನ್ನೇನು ವಿಮಾನ ಹಾರಾಟ ಆರಂಭಿಸುತ್ತದೆ ಎಂದು ಕಾದು ಸುಸ್ತಾದ ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾದರು. ಕೊನೆಗೂ ಗುರುವಾರ ನಸುಕಿನ ಜಾವ 5:30ರ ಸುಮಾರಿಗೆ ವಿಮಾನ ಮಂಗಳೂರಿನತ್ತ ಪ್ರಯಾಣ ಆರಂಭಿಸಿತು.
ಏರ್ ಇಂಡಿಯಾ ಸಂಸ್ಥೆಯೂ ಪ್ರಯಾಣಿಕರಿಗೆ ಉಳಿದುಕೊಳ್ಳಲು ಯಾವುದೇ ವ್ಯವಸ್ಥೆ ಮಾಡದೇ ವಿಮಾನದಲ್ಲೇ ಉಳಿಸಿಕೊಳ್ಳಲಾಗಿತ್ತು. ಹೀಗಾಗಿ ಮಹಿಳೆಯರು ಮಕ್ಕಳು ತೊಂದರೆಗೊಳಗಾಗಿದ್ದಾರೆ ಎಂದು ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…