ಮಂಗಳೂರು: ರಾಹುಲ್ ಗಾಂಧಿಯನ್ನು ಸಂಸದರಾಗಿ ಅನರ್ಹಗೊಳಿಸಿ ಆದೇಶ ನೀಡಿರುವುದು ಸಂಸದೀಯ ನಿಯಮ ಹಾಗೂ ಪ್ರಜಾಪ್ರಭುತ್ವ ಕಗ್ಗೊಲೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೋದಿ ಸರ್ ನೇಮ್’ ಹೇಳಿಕೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ ಘೋಷಿಸಿರುನ ಕೋರ್ಟ್ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿದೆ.
ನ್ಯಾಯಾಲಯದ ತೀರ್ಪಿನ ಬಗ್ಗೆ ನಾನೇನೂ ಹೇಳಲಾರೆ. ಆದರೆ, ನ್ಯಾಯಾಲಯವೇ ಆದೇಶವನ್ನು ಅಮಾನತ್ತಿನಲ್ಲಿರಿಸಿ ಮೇಲ್ಮನವಿಗೆ ಅವಕಾಶ ನೀಡಿರುವಾಗ ಸಂಸದ ಸ್ಥಾನದಿಂದ ಅರ್ಹಗೊಳಿಸಿರುವ ಪ್ರಕ್ರಿಯೆ ಮುಂದೆ ದೇಶದ ಪ್ರತಿಯೊಂದು ಸಂಸದರಿಗೂ ಅನ್ವಯವಾಗಲಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದರು.
ರಾಹುಲ್ ಗಾಂಧಿ ಸತ್ಯ ಮಾತನಾಡಿದರೆ ಬಿಡದವರು ಇನ್ನು ಜನಸಾಮಾನ್ಯರಿಗೆ ಬಿಡಬಹುದೇ ಎಂದು ಪ್ರಶ್ನಿಸಿದ ಅವರು, ದೇಶದ ಜನತೆ ರಾಹುಲ್ ಗಾಂಧಿಯನ್ನು ಭವಿಷ್ಯದ ನಾಯಕ ಎಂದು ಬಿಂಬಿಸುತ್ತಿರುವಾಗ ಭಯದಿಂದ ಈ ರೀತಿಯ ಕೃತ್ಯ ಎಸಗಲಾಗುತ್ತಿದೆ.
ಇದಕ್ಕೆಲ್ಲಾ ಕಾಂಗ್ರೆಸ್ ಹೆದರುವುದಿಲ್ಲ. ಸತ್ಯ ಮಾತನಾಡುವ ರಾಹುಲ್ ಜತೆಗೆ ಕಾಂಗ್ರೆಸ್‌ನ ಪ್ರತಿಯೊಬ್ಬರೂ ಇದ್ದಾರೆ ಎಂದವರು ಹೇಳಿದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…