Featured

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24

ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಯುವತಿಯ ಮೇಲೆ ದಾಳಿ ಪ್ರಕರಣ : ಮೂವರ ಬಂಧನ -Vshwanews24

ಮಂಗಳೂರು: ನಗರದ ಹೋಟೆಲೊಂದರಲ್ಲಿ ಯುವತಿಯ ಮೇಲೆ ಆಕೆಯ ಹಳೆಯ ಸ್ನೇಹಿತ ಮತ್ತು ಮತ್ತವನ ಗೆಳೆಯರು ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳನ್ನು ಬೊಕ್ಕಪಟ್ಣದ ತ್ರಿಶೂಲ್ ಸಾಲಿಯಾನ್, ಕೋಡಿಕಲ್ ನ ಸಂತೋಷ್ ಪೂಜಾರಿ ಮತ್ತು ಅಶೋಕ್ ನಗರದ ದ್ಯಾನೇಶ್ ಅರನ್ ಎಂದು ಗುರುತಿಸಲಾಗಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, “ಶನಿವಾರ ಬೆಂದೂರ್ ವೆಲ್‌ನ ರೆಸ್ಟೋರೆಂಟ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾಗ ಆರೋಪಿಯು ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದು, ಈ ಕೃತ್ಯವನ್ನು ತಡೆಯಲು ಬಂದ ಯುವತಿಯ ಸ್ನೇಹಿತರಿಗೆ ಗಂಬೀರವಾಗಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ್ದು, ಭಾರತೀಯ ದಂಡ ಸಂಹಿತೆ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಪ್ರಕಾರ ವಿವಿಧ ನಿಬಂಧನೆಗಳ ಅಡಿಯಲ್ಲಿ ನಗರ (ಪೂರ್ವ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದರು.

ಕಾಪು ಪೊಲೀಸ್ ವೃತ್ತ ನೀರಿಕ್ಷಕರಿಂದ ERSS 112 ಬಗ್ಗೆ ಕಟಪಾಡಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ಸಭೆ.-vishwanews24 –

ಇನ್ನು “18 ವರ್ಷದ ಯುವತಿ ಪಿಯುಸಿ ಓದುತ್ತಿದ್ದು, ಆಕೆಯ ಪೋಷಕರು ಕೆನಡಾದಲ್ಲಿರುವುದರಿಂದ ಅಜ್ಜಿಯರೊಂದಿಗೆ ವಾಸಿಸುತ್ತಿರುತ್ತಾಳೆ. ತ್ರಿಶೂಲ್ ಸಾಲ್ಯಾನ್ ಮತ್ತು ಯುವತಿ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ಪರಿಚಯವಾಗಿದ್ದರು. ನಂತರ ವೈಮಸ್ಸು ಉಂಟಾಗಿ ಯುವತಿ ಆತನಿಂದ ದೂರವಾಗಲು ನಿರ್ಧರಿಸಿದ್ದಳು. ಹೀಗಾಗಿ ಆತ ನೀಡಿದ್ದ ಗಿಫ್ಟ್ ಗಳನ್ನು ಮರಳಿಸಲು ಕೆಲ ದಿನಗಳ ಹಿಂದೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ಬರುವಂತೆ ಹೇಳಿದ್ದಳು. ಈ ವೇಳೆಯೂ ತ್ರಿಶೂಲ್ ಆಕೆಯ ಮೇಲೆ ದಾಳಿಗೆ ಯತ್ನಿಸಿದ್ದ” ಎಂದು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯುವತಿಯು ಕದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಳು. ನನ್ನ ಮತ್ತು ನನ್ನ ಸ್ನೇಹಿತರ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ಯುವತಿ ದೂರು ನೀಡಿದ್ದಳು

ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago