Featured

ಮಂಗಳೂರು: ರೈಲಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು – vishwanews24

ಮಂಗಳೂರು: ರೈಲಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮಾನು ಕೆ.ಎಸ್‌. ಅವರು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಅ. 28ರಂದು ತೀರ್ಪು ನೀಡಿದ್ದಾರೆ.

ಬಂಟ್ವಾಳ ಬಿ. ಕಸಬಾ ಗ್ರಾಮ ನೆಹರೂ ನಗರದ ಅಬುತಾಹಿರ್‌ ಆಲಿಯಾಸ್‌ ಶಾಝಿಲ್‌(20) ಶಿಕ್ಷೆಗೊಳಗಾದ ಆರೋಪಿ.

ಪ್ರಕರಣದ ವಿವರ : ಆರೋಪಿ ಅಬುತಾಹಿರ್‌ ಅಪ್ರಾಪ್ತ ವಯಸ್ಸಿನ ಬಾಲಕಿಯ ಪರಿಚಯವಾಗಿ ಫೋನ್‌ ಮೂಲಕ ಸಂರ್ಪಕದಲ್ಲಿದ್ದ. 2023ರ ಜೂ. 22ರಂದು ಮಡಂತ್ಯಾರಿನಲ್ಲಿ ಭೇಟಿಯಾಗೋಣ ಎಂದು ಹೇಳಿದ್ದು, ಆ ದಿನ ಶಾಲೆಗೆಂದು ಮನೆಯಿಂದ ಹೊರಟು ಬಂದ ಬಾಲಕಿಯನ್ನು ಆರೋಪಿ ಮಡಂತ್ಯಾರಿನಲ್ಲಿ ಭೇಟಿಯಾಗಿದ್ದ. ಒತ್ತಾಯಪಡಿಸಿ ಮಂಗಳೂರಿಗೆ ಕರೆದುಕೊಂಡು ಬಂದು ಅಲ್ಲಿಂದ ಗೋವಾಕ್ಕೆ ಹೋಗಲು ಮಂಗಳೂರು ಸೆಂಟ್ರಲ್‌ ರೈಲ್ವೇ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಅಲ್ಲಿ ರಾತ್ರಿ ಸುಮಾರು 11ರಿಂದ 12 ಗಂಟೆಯ ಮಧ್ಯದ ಅವಧಿಯಲ್ಲಿ ಮಂಗಳೂರು ಸೆಂಟ್ರಲ್‌ ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ನಂ. 3ರಲ್ಲಿ ತಂಗಿದ್ದ ಮಂಗಳೂರು ಮಡಗಾಂವ್‌ ರೈಲಿನ ಯಾರೂ ಇಲ್ಲದ ಬೋಗಿಯ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದ.

ಬಾಲಕಿ ಕಾಣೆಯಾದ ಬಗ್ಗೆ ಆಕೆಯ ತಾಯಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ರಾತ್ರಿ 12ಕ್ಕೆ ಬಾಲಕಿ ಮಂಗಳೂರು ಸೆಂಟ್ರಲ್‌ ರೈಲ್ವೇ ನಿಲ್ದಾಣದಿಂದ ತನ್ನ ತಾಯಿಗೆ ಕರೆ ಮಾಡಿದ್ದಳು. ಈ ವಿಷಯವನ್ನು ತಾಯಿ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಮಂಗಳೂರು ಸೆಂಟ್ರಲ್‌ ರೈಲ್ವೇ ನಿಲ್ದಾಣಕ್ಕೆ ಬಂದು ನೊಂದ ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು.

17 ಸಾಕ್ಷಿದಾರರ ವಿಚಾರಣೆ: ಆಗಿನ ಪುಂಜಾಲಕಟ್ಟೆ ಪೊಲೀಸ್‌ ವೃತ್ತ ನಿರೀಕ್ಷಕರಾದ ಶಿವಕುಮಾರ್‌ ಬಿ. ಮತ್ತು ನಾಗೇಶ್‌ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೊಕೊÕà ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಅಭಿಯೋಜನೆ ಪರ ಒಟ್ಟು 17 ಸಾಕ್ಷಿದಾರರನ್ನು ವಿಚಾರಿಸಿ 31 ದಾಖಲೆಗಳನ್ನು ಗುರುತಿಸಿ ಆರೋಪಿತನ ವಿರುದ್ಧ ಅಪರಾಧವು ಸಾಬೀತಾಗಿದೆ ಎಂದು ತೀರ್ಮಾನಿಸಿ ಅ. 28ರಂದು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಬಾಲಕಿಗೆ ಪರಿಹಾರಕ್ಕೆ ಸೂಚನೆ
20 ವರ್ಷ ಜೈಲು ಮತ್ತು ಒಟ್ಟು 60,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವಾದ 50,000 ರೂ.ಗಳನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1.50 ಲ.ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶನ ನೀಡಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕ ಕೆ. ಬದರಿನಾಥ ನಾಯರಿ ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago