Featured

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ – vishwanews24

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ

ಮಂಗಳೂರು: ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ ಬಗ್ಗೆ ರೈಲ್ವೆ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕಾರ್ಯರೂಪಕ್ಕೆ ತರುವುದಕ್ಕೆ ರಾಜ್ಯ ಸರ್ಕಾರವು ಪೂರ್ಣ ರೀತಿಯ ಆಡಳಿತಾತ್ಮಕ ಸಹಕಾರ ನೀಡಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗೆ ಬರೆದಿರುವ ಈ ಸುಧೀರ್ಘ ಪತ್ರದಲ್ಲಿ ಕ್ಯಾ. ಚೌಟ ಅವರು ಹಲವಾರು ವಿಚಾರಗಳನ್ನು ಉಲ್ಲೇಖಿಸಿದ್ದು, ಮಂಗಳೂರು ರೈಲು ಜಾಲವನ್ನು ಪಾಲ್ಘಾಟ್‌ ವಿಭಾಗದಿಂದ ಬೇರ್ಪಡಿಸಿ ಮೈಸೂರು ವಿಭಾಗಕ್ಕೆ ಸೇರಿಸುವುದಕ್ಕೆ ರೈಲ್ವೆ ಸಚಿವಾಲಯವು ಈಗಾಗಲೇ ಅಗತ್ಯ ಕ್ರಮ ಕೈಗೊಂಡು ಈ ಬಗ್ಗೆ ಅಧಿಸೂಚನೆ ಕೂಡ ಹೊರಡಿಸಿದೆ. ಕರಾವಳಿ ರೈಲು ಪ್ರಯಾಣಿಕರ ಬಹು ವರ್ಷಗಳ ಈ ಬೇಡಿಕೆ ಈಡೇರಿರುವುದಿಂದ ಈ ಭಾಗಕ್ಕೆ ಮಾತ್ರವಲ್ಲ ಸಮಗ್ರ ಕರ್ನಾಟಕದ ರೈಲು ಜಾಲ ಬಲವರ್ಧನೆಗೂ ಇದೊಂದು ಮಹತ್ವದ ಹೆಜ್ಜೆಯಾಗಿದೆ.

ಹೀಗಿರುವಾಗ, ಆದಷ್ಟು ಬೇಗ ಮಂಗಳೂರು ರೈಲು ಭಾಗವನ್ನು ಮೈಸೂರು ವಿಭಾಗದ ಜತೆಗೆ ಸೇರಿಸುವ ಪ್ರಕ್ರಿಯೆ ಪೂರ್ಣಗೊಳಿಸುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಜತೆಗೆ, ಈ ನಿಟ್ಟಿನಲ್ಲಿ ಯಾವುದೇ ರೀತಿಯ ಗೊಂದಲ ಅಥವಾ ಆಡಳಿತಾತ್ಮಕ ವಿಳಂಬ ಆಗದ ರೀತಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕ್ಯಾ. ಚೌಟ ಅವರು ಸಿಎಂಗೆ ಮನವಿ ಮಾಡಿದ್ದಾರೆ.

ರೈಲ್ವೆ ಮಂಡಳಿ ಹೊರಡಿಸಿರುವ ಮಹತ್ವದ ಈ ಆದೇಶ ಮರುಪರಿಶೀಲಿಸುವಂತೆ ಕೇರಳ ಮುಖ್ಯಮಂತ್ರಿಗಳಿಂದ ಹಿಡಿದು ಅಲ್ಲಿನ ರಾಜಕೀಯ ಪಕ್ಷಗಳು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ವರದಿಯಾಗಿದೆ. ಈ ಎಲ್ಲ ಬೆಳವಣಿಗೆ ಗಮನಿಸಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಮಂಗಳೂರು ರೈಲು ಭಾಗ ಮೈಸೂರು ವಿಭಾಗಕ್ಕೆ ಸೇರಿಸುವ ಮೂಲಕ ಕರ್ನಾಟಕದ ಹಿತ ಕಾಪಾಡುವುದಕ್ಕೆ ಡಿ.ಕೆ. ಶಿವಕುಮಾರ್ ಅವರು ಬಹಳ ತುರ್ತಾಗಿ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ಆ ಮೂಲಕ, ಯಾವುದೇ ಕಾರಣಕ್ಕೂ ರೈಲ್ವೆ ಸಚಿವಾಲಯದ ಈ ಆದೇಶ ಜಾರಿಗೆ ಅಡ್ಡಿ-ಆತಂಕಗಳು ಎದುರಾಗದಂತೆ ನೋಡಿಕೊಳ್ಳಬೇಕೆಂದು ಕ್ಯಾ. ಚೌಟ ಅವರು ಕೋರಿದ್ದಾರೆ.

ಈ ನಿರ್ಧಾರದಿಂದ ಮಂಗಳೂರು ರೈಲ್ವೇ ಜಾಲದ ಸಮಗ್ರ ಸುಧಾರಣೆ, ಆಡಳಿತ ವ್ಯವಸ್ಥೆ ಮತ್ತು ಕಾರ್ಯಾಚರಣೆಗೆ ಹೆಚ್ಚಿನ ಅನುಕೂಲವಾಗಲಿದೆ. ಭಾರತ ಸರ್ಕಾರವು ವಸ್ತುಸ್ಥಿತಿಯ ಪರಾಮರ್ಶಿಸಿ ಇಡೀ ಕರಾವಳಿ ಹಾಗೂ ಕರ್ನಾಟಕದ ರೈಲು ವ್ಯವಸ್ಥೆಯನ್ನ ಮತ್ತಷ್ಟು ಬಲವರ್ಧನೆಗೊಳಿಸುವುದಕ್ಕೆ ಮಹತ್ವದ ನಿರ್ಧಾರವನ್ನು ಅಂತಿಮವಾಗಿ ಕೈಗೊಂಡು ಅಧಿಸೂಚನೆ ಹೊರಡಿಸಿದೆ.

ಹೀಗಿರುವಾಗ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನೆರೆಯ ರಾಜ್ಯದ ವಿರುದ್ಧದ ನಿಲುವಾಗಿ ನೋಡದೆ, ಮಂಗಳೂರಿನ ಆಡಳಿತಾತ್ಮಕ ಅಗತ್ಯವೆಂದು ಪರಿಗಣಿಸಬೇಕಿದೆ. ಅಲ್ಲದೆ, ಕೇರಳದ ಕಡೆಯಿಂದ ಅಪಸ್ವರ ಕೇಳಿ ಬಂದಿರುವ ಕಾರಣ, ಕರ್ನಾಟಕ ಸರ್ಕಾರವು ತನ್ನ ಸ್ಪಷ್ಟ ನಿಲುವನ್ನು ಕೂಡಾ ಕೇಂದ್ರ ಸರ್ಕಾರದ ಮುಂದೆ ಅಧಿಕೃತವಾಗಿ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕ್ಯಾ. ಚೌಟ ಅವರು ಸಿಎಂ ಡಿಕೆ ಶಿವಕುಮಾರ್‌ಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

Vishwa News 24

Recent Posts

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

1 minute ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 minutes ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

19 minutes ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

31 minutes ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

41 minutes ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

53 minutes ago