Featured

ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24

ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24

ಬೆಂಗಳೂರು: ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರಿಡಬೇಕು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಮಾಜಿ ಸಚಿವ ಯುಟಿ ಖಾದರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಅಂದಿನ ಕಾಲದಲ್ಲಿ ಅಸಮಾನತೆಯ ವಿರುದ್ಧ ಹೋರಾಡಿದ ತುಳುನಾಡಿನ ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕು. ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನಿಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇದೇ ವೇಳೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹೆಸರನ್ನಿಡಬೇಕು ಎಂದು ಯುಟಿ ಖಾದರ್ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24

ಇತ್ತೀಚೆಗೆ ಜಿಲ್ಲೆಯ ಬಿಲ್ಲವ ಸಂಘಟನೆಗಳು ಮಂಗಳೂರಿನ ಕುದ್ರೋಳಿ ಸಮೀಪದ ಲೇಡಿಹಿಲ್‌ ಸರ್ಕಲ್‌ಗೆ ನಾರಾಯಣ ಗುರು ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಅಲ್ಲದೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಇದಕ್ಕಾಗಿ ಕೆಲವಾರದ ಹಿಂದೆ ಬೈಕ್‌ ಜಾಥಾವನ್ನೂ ನಡೆಸಲಾಗಿತ್ತು. ವಾರದ ಹಿಂದಷ್ಟೇ ವಿಮಾನ ನಿಲ್ದಣಕ್ಕೆ ಹೆಸರನ್ನಿಡುವ ಬಗ್ಗೆ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಈ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ್ದರು.

ರೈತರ ಪ್ರತಿಭಟನೆ ಬಗ್ಗೆ ಚರ್ಚೆಗೆ ಆಗ್ರಹ : ಪ್ರತಿಪಕ್ಷಗಳ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ ಮತ್ತು ಡಿಎಂಕೆ ಸದಸ್ಯರ ಸಭಾತ್ಯಾಗ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

6 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

11 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

11 hours ago