Featured

ಮಂಗಳೂರು: ಲಂಚ ಸ್ವೀಕರಿಸಿದ ಆರೋಪ ; ಪ್ರೋ. ಡಾ|ಅನಿತಾ ರವಿಶಂಕರ್ ಗೆ ಐದು ವರ್ಷಗಳ ಜೈಲು ಶಿಕ್ಷೆ – Vishwanews24

ಮಂಗಳೂರು: ಲಂಚ ಸ್ವೀಕರಿಸಿದ ಆರೋಪ ; ಪ್ರೋ. ಡಾ|ಅನಿತಾ ರವಿಶಂಕರ್ ಗೆ ಐದು ವರ್ಷಗಳ ಜೈಲು ಶಿಕ್ಷೆ – Vishwanews24

ಮಂಗಳೂರು : ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಅನಿತಾ ರವಿಶಂಕರ್ ಅವರಿಗೆ ಲಂಚ ಪಡೆದ ಆರೋಪದ ಮೇಲೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

2012ರ ಡಿಸೆಂಬರ್ 4ರಂದು ಡಾ.ಅನಿತಾ ರವಿಶಂಕರ್ ಅವರು ಪಿಎಚ್‌ಡಿ ವಿದ್ಯಾರ್ಥಿನಿ ಪ್ರೇಮಾ ಡಿ’ಸೋಜಾ ಅವರಿಂದ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿಗೆಂದು 16,800 ರೂ.ಗಳನ್ನು ಲಂಚವಾಗಿ ಬೇಡಿಕೆ ಇಟ್ಟಿದ್ದರು.

ಇದರ ಮುಂಗಡ ಹಣ ವಾಗಿ 5000 ರೂ. ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ಮಾಡಿ ಪ್ರಸ್ತುತ ಕೊಣಾಜೆ ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಆಗಿರುವ ಡಾ. ಅನಿತಾ ರವಿಶಂಕರ್ ರವರನ್ನು ಬಂಧಿಸಿದ್ದರು. ಅನಿತಾ ಆರಂಭದಲ್ಲಿ 10,000 ರೂ, 4,000 ಬಳಿಕ 16,800 ರೂ.ಗಳನ್ನು ಬೇಡಿಕೆ ಇಟ್ಟಿದ್ದರು ಎಂದು ದೂರುದಾರರು ಆರೋಪಿಸಿದ್ದರು.

ಲೋಕಾಯುಕ್ತ ಪರವಾಗಿ ನ್ಯಾಯಾಲಯವು ಒಂಬತ್ತು ಸಾಕ್ಷಿಗಳನ್ನು ವಿಚಾರಣೆಗೆ ಒಳ ಪಡಿಸಲಾಗಿತ್ತು . ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಆರೋಪಿಗೆ ಎರಡು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ 15 ಸಾವಿರ ರೂ.ಗಳ ದಂಡ ಮತ್ತು ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು 15 ಸಾವಿರ ರೂ. ದಂಡ. ಆರೋಪಿ ದಂಡ ಪಾವತಿಸಲು ವಿಫಲವಾದರೆ ತಲಾ ಒಂದು ತಿಂಗಳುಗಳ ಸಾದಾ ಸಜೆ ಅನುಭವಿಸಬೇಕೆಂದು ಜು.೦೯ ರಂದು ನ್ಯಾಯಾಲಯ ಆದೇಶಿಸಿದೆ. ಎರಡೂ ಅಪರಾಧಕ್ಕೆ ಸಂಬಂದಿಸಿದ ಶಿಕ್ಷೆಗಳನ್ನು ಅಪರಾಧಿ ಜೊತೆಯಾಗಿ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago