ಮಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘನೆ – 77 ವಾಹನ ವಶ, 1.26 ಲ.ರೂ. ದಂಡ ಸಂಗ್ರಹ – Vishwanews24
ಮಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘನೆ – 77 ವಾಹನ ವಶ, 1.26 ಲ.ರೂ. ದಂಡ ಸಂಗ್ರಹ – Vishwanews24
ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಠಿಣ ನಿಯಂತ್ರಣ ಹಾಕಿದ್ದು ಜೂ.೮ ರ ಮಂಗಳವಾರ ಒಂದೇದಿನ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸಿದ 77 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು 78,050 ರೂಪಾಯಿ ದಂಡ ಸಂಗ್ರಹಿಸಿದ್ದಾರೆ.
ಇನ್ನು ಮೊಟಾರು ವಾಹನ ಕಾಯಿದೆಯಡಿ 47,900 ರೂ. ದಂಡ ವಸೂಲಿ ಮಾಡಿದ್ದಾರೆ. ಇದಲ್ಲದೆ ಮಾಸ್ಕ್ ಧರಿಸಿದ 487 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ 8 ಹಾಗೂ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 4 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ. 20 ರಿಂದ 21ರಷ್ಟಿದ್ದು, ಇದನ್ನು ಶೇಕಡಾ 5ಕ್ಕೆ ಇಳಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಜೂ.14 ರವರೆಗೆ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು.
