Featured

ಮಂಗಳೂರು:  ಲಾಕ್ ಡೌನ್ ನಿಯಮ ಉಲ್ಲಂಘನೆ – 77 ವಾಹನ  ವಶ, 1.26 ಲ.ರೂ. ದಂಡ ಸಂಗ್ರಹ – Vishwanews24

ಮಂಗಳೂರು:  ಲಾಕ್ ಡೌನ್ ನಿಯಮ ಉಲ್ಲಂಘನೆ – 77 ವಾಹನ  ವಶ, 1.26 ಲ.ರೂ. ದಂಡ ಸಂಗ್ರಹ – Vishwanews24

ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಠಿಣ ನಿಯಂತ್ರಣ ಹಾಕಿದ್ದು ಜೂ.೮ ರ ಮಂಗಳವಾರ ಒಂದೇದಿನ  ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಂಚರಿಸಿದ 77 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು 78,050 ರೂಪಾಯಿ ದಂಡ ಸಂಗ್ರಹಿಸಿದ್ದಾರೆ.

ಇನ್ನು ಮೊಟಾರು ವಾಹನ ಕಾಯಿದೆಯಡಿ 47,900 ರೂ. ದಂಡ ವಸೂಲಿ ಮಾಡಿದ್ದಾರೆ. ಇದಲ್ಲದೆ ಮಾಸ್ಕ್ ಧರಿಸಿದ 487 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿ 8 ಹಾಗೂ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 4 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ. 20 ರಿಂದ 21ರಷ್ಟಿದ್ದು, ಇದನ್ನು ಶೇಕಡಾ 5ಕ್ಕೆ ಇಳಿಸುವುದು ಅನಿವಾರ್ಯವಾಗಿದೆ. ಹೀಗಾಗಿ ಮುಂದಿನ ಒಂದು ವಾರ ನಿರ್ಣಾಯಕವಾಗಿರುವುದರಿಂದ ಜೂ.14 ರವರೆಗೆ ಲಾಕ್ ಡೌನ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಈ ಹಿಂದೆಯೇ ಎಚ್ಚರಿಕೆ ನೀಡಿದ್ದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago