ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಎ.4ರಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಎಲ್ಲಾ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಹ್ಮದ್ ಖುರೇಶಿ ಎಂಬಾತನನ್ನು ಅಕ್ರಮವಾಗಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೆ ದೌರ್ಜನ್ಯ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾಗಿದ್ದರು.
ಇದನ್ನೂ ಓದಿ :
ಈ ಸಂದರ್ಭ ಪರಿಸ್ಥಿತಿ ಉದ್ವಿಗ್ನಗೊಂಡ ಬಳಿಕ ಕಲ್ಲುತೂರಾಟ ನಡೆದಿದೆ ಎಂಬ ಆರೋಪದಲ್ಲಿ ಹಲವರ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ 101 ಮಂದಿಯ ವಿರುದ್ಧ ಅಂತಿಮ ವರದಿ ಸಲ್ಲಿಸಲಾಗಿತ್ತು. ಆ ಪೈಕಿ ಎರಡು ಪ್ರಕರಣಗಳು ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಮತ್ತು ಇನ್ನೊಂದು ಪ್ರಕರಣದ ಬಗ್ಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ಆರೋಪಗಳನ್ನು ಸಾಬೀತುಪಡಿಸಲು ಸರಕಾರಿ ಪರ ವಕೀಲರು ವಿಫಲವಾಗಿದ್ದಾರೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟು ಪ್ರಕರಣದಿಂದ ಆರೋಪಿಗಳನ್ನು ಖುಲಾಸೆಗೊಳಿಸಿದ್ದಾರೆ.
ಇದನ್ನೂ ಓದಿ :
ಆರೋಪಿಗಳ ಪರವಾಗಿ ಮಂಗಳೂರಿನ ಲೆಕ್ಸ್ ಜೂರಿಸ್ ವಕೀಲರಾದ ಆಸಿಫ್ ಬೈಕಾಡಿ, ಮುಫೀದಾ ರಹ್ಮಾನ್, ಇರ್ಷಾದ್ ಸಖಾಫಿ ಮೊಂಟೆಪದವು, ಅಯಾಝ್ ಚಾರ್ಮಾಡಿ, ಮುಹಮ್ಮದ್ ಆದಿಲ್, ನಿಶಾನ್ ಎಂ.ಕೆ, ರುಬೀನ, ಅಂಸೀನ ವಾದಿಸಿದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…