Featured

ಮಂಗಳೂರು: ಲಾರಿ ಢಿಕ್ಕಿ ; ಪಾದಚಾರಿ ಸಾವು – Vishwanews24

ಮಂಗಳೂರು: ಲಾರಿ ಢಿಕ್ಕಿ ; ಪಾದಚಾರಿ ಸಾವು

ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಇಂದು ಮುಂಜಾನೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಅಶೋಕನಗರದ ನಿವಾಸಿ ಎನ್ನಲಾದ ಸುಮಾರು 40-45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ತನ್ನ ಆಯಕ್ಟಿವಾ ದ್ವಿಚಕ್ರ ವಾಹನವನ್ನು ರಸ್ತೆ ಪಕ್ಕ ನಿಲ್ಲಿಸಿ ವಾಕಿಂಗ್ ನಿರತರಾಗಿದ್ದ ವೇಳೆ ಹರ್ಯಾಣದ ನೋಂದಣಿ ಹೊಂದಿದ ಲಾರಿ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.

ಇದರಿಂದ ಪಾದಚಾರಿ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಪರೀಕ್ಷಿಸಿದ ವೈದ್ಯರು ಗಾಯಾಳು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.‌ ಸಂಚಾರ ಉತ್ತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗೋವು ಕಳ್ಳರನ್ನು ಬಿಡುಗಡೆ ಮಾಡಲು ಸ್ಟೇಷನ್ ಗೆ ಮೊದಲು ಕರೆ ಬರುವುದು ಲಾಲಾಜಿಯದ್ದು : ಸೊರಕೆ ಗಂಭೀರ ಆರೋಪ -vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago