ಮಂಗಳೂರು : ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ನಾಮಕರಣ ಮಾಡಬೇಕು ಎಂಬ ಮಂಗಳೂರು ಮಹಾನಗರ ಪಾಲಿಕೆಯ ಪ್ರಸ್ತಾಪಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದ್ದು, ಏ.14ರಂದು ಸಂಜೆ 7 ಗಂಟೆಗೆ ವೃತ್ತ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.
ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಶಾಸಕ ಡಿ.ವೇದವ್ಯಾಸ್ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಉಪಸ್ಥಿತಿಯಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ನಾಮಕರಣ ಮಾಡಬೇಕೆಂದು ಹಲವಾರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಈ ಬಗ್ಗೆ ನಾನಾ ಸಂಘಟನೆಗಳು ಮಂಗಳೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿತ್ತು.
ಕಳೆದ ವರ್ಷ ಮೇಯರ್ ದಿವಾಕರ ಪಾಂಡೇಶ್ವರ ಅವರ ಅಧಿಕಾರವಧಿಯಲ್ಲಿ ಪಾಲಿಕೆ ಸಾಮಾನ್ಯ ಸಭೆಯಲ್ಲಿಈ ಬಗ್ಗೆ ಕಾರ್ಯಸೂಚಿ ಮಂಡಿಸಿ ಸಭೆಯ ಅನುಮೋದನೆ ಪಡೆಯಲಾಗಿತ್ತು. ವೃತ್ತ, ರಸ್ತೆಗಳಿಗೆ ನಾಮಕಾರಣ ಮಾಡುವ ಅಧಿಕಾರ ರಾಜ್ಯ ಸರಕಾರದ್ದಾಗಿರುವ ಕಾರಣ ಈ ಪ್ರಸ್ತಾವನೆಯನ್ನು ಪಾಲಿಕೆ ವತಿಯಿಂದ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿತ್ತು. ಇದೀಗ ರಾಜ್ಯ ಸರಕಾರದಿಂದ ಅಧಿಕೃತವಾಗಿ ಅನುಮೋದನೆ ಸಿಕ್ಕಿದ್ದು, ಮುಂದೆ ಲೇಡಿಹಿಲ್‌ನಲ್ಲಿ ಸುಂದರ ಬ್ರಹ್ಮಶ್ರೀ ನಾರಾಯಣಗುರು ವೃತ್ತ ನಿರ್ಮಾಣವಾಗಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…