Featured

ಮಂಗಳೂರು: ಲೋಕಸಭಾ ಚುನಾವಣೆ -ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಲೀಂ ಅಹ್ಮದ್ – Vishwanews24

ಮಂಗಳೂರು: ಲೋಕಸಭಾ ಚುನಾವಣೆ -ತಿಂಗಳ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ : ಸಲೀಂ ಅಹ್ಮದ್

ಮಂಗಳೂರು (Vishwanews24): ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಮುಂದುವರೆದಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷವೂ ಈ ಬಾರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ, ಇದು ಆಂತರಿಕ ಸರ್ವೇ ವರದಿಯಲ್ಲಿ ಬಹಿರಂಗಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆ ಬಿಡುಗಡೆಯಾಗಲಿದೆ. ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದೆ. ಇದರ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮವಾಗಲಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ನ 5 ಮಂದಿಯ ಹೆಸರಿನ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ದ.ಕ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಿದೆ.ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಗಳಿಸುವುದಿಲ್ಲ, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಫೆ.17ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದ್ದು, ಸಮಾವೇಶದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆರವೇರಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ವಿವರಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

2 days ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 days ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 days ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago