ಮಂಗಳೂರು : ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಪುತ್ತೂರಿನಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಹಿಂದು ಸಂಘಟಕ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ರಾಜ್ಯಾದ್ಯಂತ ಮದ್ಯ ಮಾರಾಟದ ಬೆಲೆಯನ್ನು 20 ರೂಪಾಯಿ ಏರಿಕೆ ಮಾಡಿದ್ದಾರೆ. ಇಂತಹ ಇನ್ನಷ್ಟು ಏರಿಕೆಗಳು ರಾಜ್ಯದಲ್ಲಿ ಆಗಬಹುದು. ಇದೀಗ ವಿದ್ಯುತ್ ದರ ಏರಿಕೆ ಆಗಿರುವುದು ರಾಜ್ಯಾದ್ಯಂತ ಚರ್ಚೆಯಾಗುತ್ತಿದೆ.
ದಕ್ಷಿಣ ಕನ್ನಡ ಸಂಸದ ಸ್ಥಾನಕ್ಕೆ ಪುತ್ತಿಲ ಅಭ್ಯರ್ಥಿ ಆಗಬೇಕು ಎಂಬ ಒತ್ತಡಕ್ಕೆ ಉತ್ತರಿಸಿದ ಅವರು ದ.ಕ ಲೋಕಸಭಾ ಸ್ಥಾನಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿ ಹೈಕಮಾಂಡಿಗೆ ಬಿಟ್ಟು ವಿಚಾರ. ಸಾಮಾಜಿಕ ವ್ಯವಸ್ಥೆಯಲ್ಲಿ ಕಾರ್ಯಕರ್ತರಿಗೆ ಅಭ್ಯರ್ಥಿ ಯಾರು ಎಂದು ನಿರೀಕ್ಷೆ ಇರೋದು ಸಹಜ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಎಂದು ಮುಂದಿನ ದಿನದಲ್ಲಿ ಕಾದು ನೋಡೋಣ ಎಂದರು.
ಮಾಜಿ ಸಿಎಂ ಸದಾನಂದ ಗೌಡ ಬಿಜೆಪಿ ಮೇಲೆ ಬೇಸರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ರಾಜಕೀಯ ವ್ಯವಸ್ಥೆಯಲ್ಲಿ ಗೌರವ ಮತ್ತು ಶಿಕ್ಷೆ ಎರಡೂ ಸಿಗುತ್ತದೆ. ಸದಾನಂದ ಗೌಡ ಏನು ಮಾಡಿದ್ದಾರೆ ಎಂದು ಕರ್ನಾಟಕ ಜನತೆಗೆ ಗೊತ್ತಿದೆ. ಅವರ ನಿರ್ಧಾರ ಅವರಿಗೆ ಬಿಟ್ಟದ್ದು ನಾನು ಪ್ರತಿಕ್ರಿಯೆ ನೀಡಲ್ಲ ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…