ಮಂಗಳೂರು: ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಸಲ್ಲಿಸಿ ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಎ.15ರಂದು ಗೂಗಲ್ ಪ್ಲೇ ಸ್ಟೋರ್‌ನಿಂದ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಡೌನ್‌ಲೋಡ್ ಮಾಡಿ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು . ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು. ಬಳಿಕ ಹಲವು ವಾಟ್ಸ್‌ಆ್ಯಪ್ ಸಂಖ್ಯೆಗಳಿಂದ ಕರೆ ಮಾಡಿದ ಅಪರಿಚಿತರು ಪುನಃ ಸಾಲ ಪಡೆಯಬೇಕು ಎಂದು ಒತ್ತಾಯಿಸಿದರಲ್ಲದೆ ಆಕೆಯ ಖಾತೆಗೆ 14,000 ರೂ. ಜಮೆ ಮಾಡಿದ್ದರು. ಅದನ್ನು ಕೂಡ ತಾನು ಮರುಪಾವತಿ ಮಾಡಿದ್ದಳು.
ಇದಾದ ನಂತರವೂ ಕರೆ ಮಾಡಿದ ಅಪರಿಚಿತರು ಹೆಚ್ಚಿನ ಹಣ ಪಾವತಿ ಮಾಡುವಂತೆ ಒತ್ತಾಯಿಸಿದರಲ್ಲದೆ ಆಕೆಯ ಖಾತೆಯಲ್ಲಿದ್ದ ಖಾತೆಯಿಂದ 51,000 ರೂ. ವರ್ಗಾಯಿಸಿಕೊಂಡರು. ಅಲ್ಲದೆ ಮತ್ತಷ್ಟು ಹಣ ನೀಡುವಂತೆ ಒತ್ತಾಯಿಸಿದರು.
ಒಂದು ವೇಳೆ ಹಣ ನೀಡದಿದ್ದರೆ ಆಕೆಯ ಫೋಟೊವನ್ನು ಹುಡುಗನೊಂದಿಗೆ ನಗ್ನವಾಗಿ ಇರುವಂತೆ ಎಡಿಟ್ ಮಾಡಿ ನಿನ್ನ ಸ್ನೇಹಿತರು, ಸಂಬಂಧಿಕರಿಗೆ ಕಳುಹಿಸುವುದಾಗಿ, ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…