ಮಂಗಳೂರು : ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣ ದಿಂದ ಮಡಗಾಂವ್ ಗೆ ಶನಿವಾರ 12.13ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ ಆರಂಭಿಸಿದೆ.
ಪ್ರಯಾಣ ಆರಂಭದ ಸಮಯ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿದ್ದರೂ ನಂತರ 10.30 ಎಂದು ಬದಲಿಸಲಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2 ಅಮೃತ್ ಭಾರತ್ ರೈಲುಗಳಿಗೆ ಏಕ ಕಾಲದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದರು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್, ದೇಶದಲ್ಲಿ 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಅದ್ಭುತ ಪರಿವರ್ತನೆ , ಆಮೂಲಾಗ್ರ ಬದಲಾವಣೆ ಆಗಿದೆ ಎಂದರು.
ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ಬೇಡಿಕೆ ಇದೆ. ರೈಲ್ವೇ ಹಳಿ ವಿದ್ಯುದೀಕರಣ ಆಗುತ್ತಿದೆ. ಮಾರ್ಚ್ ನಲ್ಲಿ ಪೂರ್ಣ ಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಎಪ್ರಿಲ್ ನಲ್ಲಿ ಬೆಂಗಳೂರಿಗೆ ವಂದೇ ಭಾರತ್ ಆರಂಭವಾಗಲಿದೆ ಎಂದು ನಳಿನ್ ಹೇಳಿದರು.
ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, 35 ವರ್ಷಗಳಲ್ಲಿ ಹೊಸ ಪ್ಲ್ಯಾಟ್ ಫಾರ್ಮ್ ಆಗಿರಲಿಲ್ಲ. ಇದೀಗ 4 ಮತ್ತು 5 ಪ್ಲ್ಯಾಟ್ ಫಾರ್ಮ್ ಆಗಿದೆ. ಇದು ಅಭೂತಪೂರ್ವ ಅಭಿವೃದ್ಧಿ ಎಂದು ಹೇಳಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಾ. ಭಾರತ್ ಶೆಟ್ಟಿ, ಉಪ ಮೇಯರ್ ಸುನೀತ, ಮನಪಾ ಸದಸ್ಯ ವಿನಯ್ ರಾಜ್, ಪಾಲ್ಘಾಟ್ ರೈಲ್ವೆಯ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್ ಉಪಸ್ಥಿತರಿದ್ದರು
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…