ಮಂಗಳೂರು: ವರ್ಕ್ ಫ್ರಮ್ ಹೋಮ್ ಆನ್‌ಲೈನ್ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್ ಕೆಲಸದ ಜಾಹೀರಾತೊಂದರ ಲಿಂಕ್ ಕ್ಲಿಕ್ ಮಾಡಿದಾಗ ಅದು ವಾಟ್ಸ್‌ಆ್ಯಪ್ ಹೋಗಿದೆ.
ಅದರಲ್ಲಿ ಅಪರಿಚಿತ ಸಂಖ್ಯೆಯಿಂದ ಲಿಂಕ್ ಒಂದು ಬಂದಿದ್ದು. ಲಿಂಕ್ ಒತ್ತಿ ನೋಂದಣಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ ದೂರುದಾರು ಲಿಂಕ್ ತೆರೆದರು. ಬಳಿಕ ಟೆಲಿಗ್ರಾಂ ಆ್ಯಪ್ ಡೌನ್‌ಲೋಡ್ ಮಾಡಿ ಅಖೀಲ್ ಎಂಬಾತನನ್ನು ಫಾಲೋ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದನು.
ಅದರಂತೆ ಅಖೀಲ್ 5 ಟಾಸ್ಕ್‌ಗಳನ್ನು ನೀಡಿದ್ದು, ಮೊದಲಿಗೆ 500 ರೂ. ಟ್ರಾನ್ಸ್‌ಫರ್ ಮಾಡಿದ್ದಕ್ಕೆ ಲಾಭಾಂಶ ಸಹಿತ 2,000 ರೂ. ವಾಪಸು ನೀಡಿದರು. ಇದನ್ನು ನಂಬಿ ದೂರುದಾರರು ಹಂತ ಹಂತವಾಗಿ ಒಟ್ಟು 6.50 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿದ್ದಾರೆ. ಆದರೆ ಆ ಬಳಿಕ ಅಪರಿಚಿತ ವ್ಯಕ್ತಿಗಳು ವಿವಿಧ ಕಾರಣ ನೀಡಿ ಲಾಭಾಂಶ, ಹೂಡಿಕೆ ಮಾಡಿದ ಹಣ ವಾಪಸು ನೀಡಿಲ್ಲ. ಆಗ ದೂರುದಾರರಿಗೆ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…