ಮಂಗಳೂರು : ನಗರದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಆ ಊರಿಗೆ ಹೆಸರು ಬರಲು ಕಾರಣ ಎನ್ನಲಾದ ಕಲ್ಲೊಂದು ಪತ್ತೆಯಾಗಿದೆ.
ಸೋಮವಾರದಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳ ತೆರವುಗೊಳಿಸುವಾಗ ಈ ಕಲ್ಲು ಪತ್ತೆಯಾಗಿದೆ.
ಕೆತ್ತಿಕಲ್ ಎಂಬ ಹೆಸರಿಗೂ ಈ ಕೆತ್ತಿರುವ ಕಲ್ಲೇ ಕಾರಣ ಎನ್ನುತ್ತಾರೆ ಸ್ಥಳೀಯರು.ಮೇಲ್ನೋಟಕ್ಕೆ ಒಂದು ಪೀಠದ ಮೇಲೆ ಇದ್ದು ಶಿವಲಿಂಗದಂತೆ ಕಂಡುಬಂದರೂ ಕಪ್ಪುಕಲ್ಲಿನಲ್ಲಿ ಮಾಡಿದ್ದಲ್ಲ, ಬದಲಿಗೆ ಕೆಂಪುಕಲ್ಲಿನಲ್ಲಿ ವೃತ್ತಾಕಾರದಲ್ಲಿ ಕೆತ್ತಲಾಗಿದೆ. ಕಲ್ಲಿನಲ್ಲಿ ಯಾವುದೇ ಶಾಸನ ಬರೆದಿರುವುದು ಕಂಡು ಬಂದಿಲ್ಲ. ” ಬಹಳ ಹಿಂದೆ ಎತ್ತಿನಗಾಡಿಯಲ್ಲಿ ಪಯಣಿಸುವ ಕಾಲದಲ್ಲಿ ಜನರು ಇಲ್ಲಿ ಕುಳಿತು ವಿಶ್ರಾಂತಿ ಪಡೆದು ಮುಂದೆ ಸಾಗುತ್ತಿದ್ದರೆಂದು ನಮ್ಮ ಹಿರಿಯರು ಹೇಳುತ್ತಿದ್ದರು” ಎನ್ನುತ್ತಾರೆ ಸ್ಥಳೀಯರು.
ಕೆತ್ತಿಕಲ್‌ಗೆ ನೂರಾರು ವರ್ಷಗಳ ಚರಿತ್ರೆ ಇದ್ದು, ಕಲ್ಲನ್ನು ತತ್‌ಕ್ಷಣ ತೆರವು ಮಾಡದೇ, ಗೌರವಯುತವಾಗಿ ಸ್ಥಳಾಂತರ ಮಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಲ್ಲಿ ಸ್ಥಳೀಯರು ಆಗ್ರಹಿಸಿದ್ದು, ಇದಕ್ಕೊಪ್ಪಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕ್ರೇನ್ ಹಾಗೂ ಹಗ್ಗ ಬಳಸಿಕೊಂಡು ಕಲ್ಲನ್ನು ಸ್ಥಳಾಂತರಿಸುತ್ತೇವೆ, ಯಾವುದೇ ಹಾನಿ ಮಾಡುವುದಿಲ್ಲ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…