ಮಂಗಳೂರು : ಕೋವಿಡ್ ಸಾಂಕ್ರಮಿಕ ರೋಗವನ್ನು ಎದುರಿಸಲು ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್‌ಡೌನ್ ಪರಿಹಾರವಲ್ಲ, ಸರ್ಕಾರ ಪರ್ಯಾಯ ಯೋಜನೆ ಜಾರಿಗೆ ತರಬೇಕು ಎಂದು ಮಾಜಿ ಶಾಸಕ ರಮಾನಾಥ್ ರೈ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜ. 11 ರ ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು,ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸುವ ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್‌ಡೌನ್ ಮುಂತಾದ ಕಠಿಣ ಕ್ರಮಗಳು ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತದೆ. ಈ ಹಿಂದೆ ವಿಧಿಸಲಾಗಿದ್ದ ಲಾಕ್‌ಡೌನ್‌ನಿಂದ ಬಹಳಷ್ಟು ಜನರು ಉದ್ಯೋಗ, ವ್ಯವಹಾರಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಜೀವನಕ್ಕೆ ತೊಂದರೆಯಾಗುವಂತ ವಾರಾಂತ್ಯದ ಕರ್ಫ್ಯೂ ಮತ್ತು ಲಾಕ್‌ಡೌನ್ ವಿಧಿಸುವ ಮುನ್ನ ಸರ್ಕಾರ ಮರುಚಿಂತನೆ ಮಾಡಬೇಕು ಎಂದು ಹೇಳಿದ್ದಾರೆ.
“ಲಾಕ್‌ಡೌನ್, ವಿಕೇಂಡ್ ಕರ್ಫ್ಯೂ ವಿಧಿಸುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಯಕ್ಷಗಾನ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಯಾವುದೇ ಅನುಭವ ಇಲ್ಲದಿರುವುದೇ ಲಾಕ್‌ಡೌನ್‌ಗೆ ಕಾರಣವಾಯಿತು ಎಂದು ಡಾ ಸುಧಾಕರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಲಾಕ್‌ಡೌನ್ ಮತ್ತು ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ಅನೇಕರ ಸಾವಿಗೆ ನಾವು ಸಾಕ್ಷಿಯಾಗಿದ್ದೇವೆ. ಹೀಗಾಗಿ ಸರ್ಕಾರವು ಲಾಕ್‌ಡೌನ್ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೆ ತರುವ ಮುನ್ನ ಮುಂದಾಲೋಚಿಸಿಬೇಕು. ಸಾಂಕ್ರಾಮಿಕ ರೋಗವನ್ನು ಎದುರಿಸಲು ಸರ್ಕಾರ ಪರ್ಯಾಯ ಮಾರ್ಗ ಜಾರಿಗೆ ತರಬೇಕು. ಯಾವುದೇ ನಿರ್ಬಂಧ ವಿಧಿಸುವ ಮುನ್ನ ಸರ್ಕಾರ ಸಾರ್ವಜನಿಕರಿಗೂ ಸೂಕ್ತ ಸೌಲಭ್ಯಗಳನ್ನು ನೀಡಬೇಕು ” ಎಂದು ರೈ ಸಲಹೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…