Featured

ಮಂಗಳೂರು : ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ ; ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು – Vishwanews24

ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ..

ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ..

ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲು..

ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲು..

ಕನಿಷ್ಠ 3 ವರ್ಷ ಜೈಲು ಶಿಕ್ಷೆ..

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್..

ಮಂಗಳೂರು: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ಈ ಬಗ್ಗೆ ಮಾತನಾಡಿರುವ ಅವರು ‘ಎಲ್ಲರೂ ಮನೆಗಳಲ್ಲಿ ಹಾಗೂ ಕಟ್ಟಡಗಳಲ್ಲಿ ಧ್ವಜ ಹಾರಿಸುವುದಕ್ಕೆ ತೊಂದರೆ ಇಲ್ಲ. ಆದರೆ ನಿಯಮವನ್ನು ಮೀರಿದರೆ ಮಾತ್ರ ಜೈಲುಶಿಕ್ಷೆ ಅಷ್ಟೇ ಅಲ್ಲದೆ ರಾಷ್ಟ್ರಧ್ವಜಕ್ಕೆ ಅಗೌರವ, ನಾಶ, ಅಪಕೀರ್ತಿ, ಹರಿದು ಹಾಕಿದರೆ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ.

ಇದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಯಾರೇ ನಾಗರಿಕ ದೂರು ನೀಡಿದರೂ ಸಾಕಾಗುತ್ತದೆ. ಪೊಲೀಸರು ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ಅಟ್ಟಲು ಅವಕಾಶವಿದೆ. ಕನಿಷ್ಠ 3 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಹಾಗಾಗಿ ಆ.13ರಿಂದ 15ರವರೆಗೆ ಧ್ವಜಾರೋಹಣ ನಡೆಸಿ ಇಳಿಸಿದ ಬಳಿಕ ಧ್ವಜವನ್ನು ಎಸೆಯದೆ, ಜೋಪಾನವಾಗಿ ಮನೆಯಲ್ಲೇ ಇರಿಸಬೇಕು’ ಎಂದು ಹೇಳಿದರು.

ಕಾಮನ್ವೆಲ್ತ್ ಗೇಮ್ಸ್ ಗೆ ಅದ್ಧೂರಿ ತೆರೆ : 61 ಪದಕಗಳೊಂದಿಗೆ 4ನೇ ಸ್ಥಾನ ಪಡೆದ ಭಾರತ – Vishwanews24

ಸರ್ಕಾರದ ನಿಯಮದಂತೆ ಅತಿ ಗಣ್ಯರ ವಾಹನಗಳಲ್ಲಿ ಮಾತ್ರ ಎದುರು ಭಾಗದಲ್ಲಿ ಧ್ವಜ ಹಾಕಬಹುದು. ಆದರೆ ವಾಹನದ ಒಳಭಾಗದಲ್ಲಿ ಸ್ಟೇರಿಂಗ್ ಎದುರು ಮಾತ್ರ ಪುಟ್ಟ ಧ್ವಜ ಹಾಕಲು ಅಡ್ಡಿ ಇಲ್ಲ. ಕೈಮಗ್ಗ, ಖಾದಿ, ಉಣ್ಣೆ, ಪಾಲಿಸ್ಟರ್ ಧ್ವಜ ಹಾಕಲು ಅವಕಾಶ ಇದೆ. ಇಲ್ಲಿ ಪಾಲಿಸ್ಟರ್ , ಖಾದಿ, ಕಾಟನ್ ಧ್ವಜ ನೀಡಲಾಗುತ್ತಿದೆ. ರಾಷ್ಟ್ರಧ್ವಜ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಸಂದರ್ಭ ರಾತ್ರಿಯೂ ಇಳಿಸದೆ ಧ್ವಜ ಹಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

Vishwa News 24

View Comments

  • ಸರಿಯಾಗಿ ಮಾಹಿತಿ ನೀಡಿ ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲವೋ ಅಥವಾ ಪ್ಲಾಸ್ಟಿಕ್ ಧ್ವಜ ಹಾರಿಸಲು ಅವಕಾಶವಿಲ್ಲವೋ ಎಂದೂ

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago