ಮಂಗಳೂರು : ವಾಹನ ಚಲಾಯಿಸುತ್ತಿದ್ದ ಸಂದರ್ಭ ಹೃದಯಾಘಾತಕ್ಕೆ ಒಳಗಾಗೀ ಟ್ಯಾಕ್ಸಿ ಚಾಲಕ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಸಂದರ್ಭ ನಡೆದ ಅಪಘಾತದಲ್ಲಿ ಅದೃಷ್ಟವಶಾತ್ ಹೆಚ್ಚಿನ ಅವಘಡ ಸಂಭವಿಸಿಲ್ಲ.
ಮಂಗಳೂರಿನ ಪಾಂಡೇಶ್ವರ ನಿವಾಸಿ ಮೊಹಮ್ಮದ್ ಶರೀಫ್ (57) ಮೃತಪಟ್ಟವರು. ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ನಗರದ ಮಂಗಳಾದೇವಿಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದಾಗಲೇ ಮೊಹಮ್ಮದ್ ಶರೀಫ್ ಅವರಿಗೆ ಹೃದಯಾಘಾತವಾಗಿದೆ.
ಈ ಸಂದರ್ಭದಲ್ಲಿ ಕಾರನ್ನು ನಿಲ್ಲಿಸಲು ಸಾಧ್ಯವಾಗದೆ ಇವರ ಕಾರು ಟೆಂಪೋಗೆ ಡಿಕ್ಕಿ ಹೊಡೆದಿದೆ. ಸ್ವಲ್ಪದರಲ್ಲಿ ಬಸ್ ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದು ತಪ್ಪಿದೆ. ಕಾರಿನಲ್ಲಿ ಮೂರ್ಛೆ ತಪ್ಪಿದ್ದ ಮೊಹಮ್ಮದ್ ಶರೀಫ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…