ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳಿವೆ. ಇದರಿಂದಾಗಿ ಅಪಘಾತ, ದರೋಡೆ ರಸ್ತೆ ಅಪರಾಧ ಪ್ರಕರಣಗಳು ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಠಿಯಿಂದ ಪೊಲೀಸ್ ಇಲಾಖೆ ಟ್ರಾಫಿಕ್ ಡ್ರೈವ್ ಹಮ್ಮಿಕೊಂಡಿದೆ.
ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ ಪ್ರತಿದಿನಕ್ಕೆ ಒಂದೊಂದು ಆದ್ಯತೆ ನೀಡಿ ಟ್ರಾಫಿಕ್ ಡ್ರೈವ್ ಮಾಡುತ್ತೇವೆ. ಸೋಮವಾರದಂದು ಟಿಂಟ್ ವಿರುದ್ದ ಕಾರ್ಯಾಚರಣೆ ನಡೆಯಲಿದೆ. ಸೆ.28ರಂದು ನಂಬರ್ ಪ್ಲೇಟ್‌ಗಳ ವಿರುದ್ದ ಕಾರ್ಯಾಚರಣೆ ನಡೆಯಲಿದೆ” ಎಂದಿದ್ದಾರೆ.
“ಸೆ.29ರಂದು ಹೆಲ್ಮೆಟ್ ವಿರುದ್ದ ಕಾರ್ಯಾಚರಣೆ. ಸೆ.30ರಂದು ಇನ್ಶುರೆನ್ಸ್ ತಪಾಸಣೆ, ಅ.1ರಂದು ಹಳೆ ಕೇಸ್‌ಗಳ ಪರಿಶೀಲನೆ ಹಾಗೂ ಅ.2ರಂದು ಹೊಗೆ ತಪಾಸಣೆಯ ಪರಿಶೀಲನೆ ನಡೆಸಲಾಗುತ್ತದೆ” ಎಂದು ತಿಳಿಸಿದ್ದಾರೆ.
“ಒಟ್ಟಿನಲ್ಲಿ ಮಂಗಳೂರು ನಗರವನ್ನು ಹೆಚ್ಚು ಸುರಕ್ಷಿತವಾಗಿರಿಸಲು, ಮಹಿಳೆಯರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ ಸುರಕ್ಷಿತೆ ಹೆಚ್ಚು ಮಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಎಲ್ಲರೂ ಇದಕ್ಕೆ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…