ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್ ಕಾರ್ಡ್‌ಗಳು, 2 ಮೊಬೈಲ್ ಫೊನ್‌ಗಳು,, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಬಂಧಿತ ಆರೋಪಿಗಳು. ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.
ಆರೋಪಿಗಳು ಕಳೆದ ಜನವರಿ ಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್ ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್ಗೆ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದರು. ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…