ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ.
ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋ.ರೂ. ಗೂ ಅಧಿಕ ಹಣವನ್ನು ಪಡೆದುಕೊಂಡು ವಂಚಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಜನರಿಂದ ಪಾಸ್‌ಪೋರ್ಟ್‌ಗಳನ್ನು ಪಡೆದುಕೊಂಡು ಮನೆಯಲ್ಲಿ ಅಕ್ರಮವಾಗಿ ಇರಿಸುತ್ತಿದ್ದರು ಎನ್ನಲಾಗಿದೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಿಂದ 24 ಪಾಸ್‌ಪೋರ್ಟ್‌ಗಳು, 43 ಗ್ರಾಂ ಬಂಗಾರ (ಅಂದಾಜು ಮೌಲ್ಯ 4,30,000 ರೂ.) ಮತ್ತು 2 ಮೊಬೈಲ್‌ಗಳನ್ನು ಬೆಂಗಳೂರಿನಲ್ಲಿ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಎಂ.ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ, ಸಿಬ್ಬಂದಿ ನಾಗರತ್ನ, ರಾಘವೇಂದ್ರ, ಪ್ರವೀಣ್, ರಿಯಾಝ್ ಕಾರ್ಯಾಚರಣೆ ನಡೆಸಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…