Featured

ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ವಂಚನೆ : ಇಬ್ಬರ ಬಂಧನ – vishwanews24

ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ವಂಚನೆ : ಇಬ್ಬರ ಬಂಧನ

ಮಂಗಳೂರು : ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ.

ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋ.ರೂ. ಗೂ ಅಧಿಕ ಹಣವನ್ನು ಪಡೆದುಕೊಂಡು ವಂಚಿಸುತ್ತಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಜನರಿಂದ ಪಾಸ್‌ಪೋರ್ಟ್‌ಗಳನ್ನು ಪಡೆದುಕೊಂಡು ಮನೆಯಲ್ಲಿ ಅಕ್ರಮವಾಗಿ ಇರಿಸುತ್ತಿದ್ದರು ಎನ್ನಲಾಗಿದೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳಿಂದ 24 ಪಾಸ್‌ಪೋರ್ಟ್‌ಗಳು, 43 ಗ್ರಾಂ ಬಂಗಾರ (ಅಂದಾಜು ಮೌಲ್ಯ 4,30,000 ರೂ.) ಮತ್ತು 2 ಮೊಬೈಲ್‌ಗಳನ್ನು ಬೆಂಗಳೂರಿನಲ್ಲಿ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಎಂ.ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ, ಸಿಬ್ಬಂದಿ ನಾಗರತ್ನ, ರಾಘವೇಂದ್ರ, ಪ್ರವೀಣ್, ರಿಯಾಝ್ ಕಾರ್ಯಾಚರಣೆ ನಡೆಸಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

22 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

23 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

23 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

24 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

24 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago