ಮಂಗಳೂರು: ಭಾರೀ ಪ್ರಮಾಣದ ಮತ್ತು ತರಿಸುವ ಡ್ರಗ್ಸ್ ಮಿಶ್ರಿತ ಒಂದು ಕ್ವಿಂಟಾಲ್ ಬಾಂಗ್ ಚಾಕ್ಲೇಟ್‍ಗಳನ್ನು ಪೊಲೀಸರು ವಶಪಡಿಸಿಕೊಂಡ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ (45) ಹಾಗೂ ಮಂಗಳೂರಿನ ಕಾರ್ ಸ್ಟ್ರೀಟ್ ನಿವಾಸಿ ಮನೋಹರ್ ಶೇಟ್ (49) ಪೊಲೀಸರು ವಶಕ್ಕೆ ಪಡೆದ ಆರೋಪಿಗಳಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಕಾರ್ ಸ್ಟ್ರೀಟ್ ಹಾಗೂ ಹೈಲ್ಯಾಂಡ್ ಎಂಬಲ್ಲಿನ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಇವುಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ರಹಸ್ಯವಾಗಿ ಮಾರಾಟ ಮಾಡಲಾಗುತ್ತಿತ್ತು. ಉತ್ತರ ಭಾರತದಿಂದ ಇವುಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾಶಕ್ತಿ ಮುನಕ್ಕಾ, ಬಮ್‍ಬಮ್ ಮುನೆಕ್ಕಾವಟಿ, ಪಾವರ್ ಮುನಕ್ಕಾವಟಿ ಹಾಗೂ ಆನಂದ ಚೂರ್ಣ ಹೆಸರಿನಲ್ಲಿ ಈ ಚಾಕ್ಲೇಟ್‍ಗಳು ಪತ್ತೆಯಾಗಿವೆ. ಒಂದು ಚಾಕ್ಲೇಟ್‍ಗೆ 30 ರೂ.ನಂತೆ ಮಾರಾಟ ಮಾಡಲಾಗುತ್ತಿತ್ತು. ಚಾಕ್ಲೇಟ್‍ಗೆ ಅಮಲು ಪದಾರ್ಥ ಬೆರೆಸಿರುವ ಬಗ್ಗೆ ತಿಳಿಯಲು ಸ್ಯಾಂಪಲ್‍ನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲಾಗಿದೆ. ಇವುಗಳಲ್ಲಿ ಗಾಂಜಾ ವಿಶ್ರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…